ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ ಹತ್ಯೆಗೀಡಾದ 28 ಅಮಾಯಕ ಭಾರತೀಯರ ಸಾವಿಗೆ ಆಮ್ ಆದ್ಮಿ ಪಕ್ಷದ ವತಿಯಿಂದ ಸಂತಾಪ ಸೂಚಿಸಲಾಯಿತು.

ಇಂದು ಸಂಜೆ ನಗರದ ಬ್ರಿಗೇಡ್ ರಸ್ತೆಯಲ್ಲಿ ಮೊಂಬತ್ತಿ ಹಚ್ಚುವ ಮೂಲಕ ಸಂತಾಪ ವ್ಯಕ್ತಪಡಿಸಲಾಯಿತು.
ಹಲವು ಘೋಷಣೆಗಳುಳ್ಳ ಭಿತ್ತಿ ಪತ್ರಗಳನ್ನು ಪ್ರದರ್ಶಿಸಿ ಉಗ್ರರ ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು.

ಪಕ್ಷದ ಕಾರ್ಯಾಧ್ಯಕ್ಷ ಸೀತಾರಾಮ್ ಗುಂಡಪ್ಪ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರುಗಳಾದ ಜಗದೀಶ್ ಚಂದ್ರ ,ಅನಿಲ್ ನಾಚಪ್ಪ, ಪುಟ್ಟಣ್ಣ, ವೀಣಾ ಸರ್ರಾವ್, ಶಶಿಧರ್ ಆರಾಧ್ಯ , ಅಣ್ಣ ನಾಯಕ್, ಶಿವಕುಮಾರ್ ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.
