ಆಪ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಸೀತಾರಾಮ್ ಗುಂಡಪ್ಪ ನೇಮಕ

ಬೆಂಗಳೂರು: ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಸೀತಾರಾಮ್ ಗುಂಡಪ್ಪ ನೇಮಕಗೊಂಡಿದ್ದಾರೆ.

ಸೀತಾರಾಮ್ ಗುಂಡಪ್ಪ ನವರು
ಡೆಕ್ಕನ್ ಹೆರಾಲ್ಡ್ , ಹಿಂದುಸ್ತಾನ್ ಟೈಮ್ಸ್ ಮುಂತಾದ ಇಂಗ್ಲಿಷ್ ಪತ್ರಿಕೆಗಳಲ್ಲಿ ಖ್ಯಾತ ಪತ್ರಕರ್ತರಾಗಿದ್ದ ಗುಂಡಪ್ಪನವರ ಸುಪುತ್ರರಾಗಿದ್ದಾರೆ.

ವಿಜ್ಞಾನ ಕ್ಷೇತ್ರದಲ್ಲಿ ಸ್ನಾತಕೋತ್ತರ ಪದವಿ ಹೊಂದಿ ಮುಂಬೈ ವಿಶ್ವವಿದ್ಯಾನಿಲಯದ ಎಂಬಿಎ ಪದವಿ ಪಡೆದಿದ್ದಾರೆ.

ಸೌದಿ ಅರೇಬಿಯಾ , ದುಬೈ , ಅಬುದಾಬಿ, ಇರಾಕ್, ಕಜಿಕಿಸ್ತಾನ್ ಮುಂತಾದ ಸೌದಿ ರಾಷ್ಟ್ರಗಳ ತೈಲ ಹಾಗೂ ಸ್ವಾಭಾವಿಕ ಅನಿಲ ಕಂಪನಿಗಳಲ್ಲಿ ಅನೇಕ ವರ್ಷಗಳ ಕಾಲ ಇಂಜಿನಿಯರಾಗಿ ಸೇವೆ ಸಲ್ಲಿಸಿದ್ದಾರೆ.

ಭಾರತದ ರಾಜಕೀಯ ಕ್ಷೇತ್ರದಲ್ಲಿ ಭ್ರಷ್ಟಾಚಾರವನ್ನು ಸಂಪೂರ್ಣ ಅಳಿಸಿ ಹಾಕಬೇಕೆಂಬ ದಿಶೆಯಲ್ಲಿ ಲೋಕಪಾಲ್ ಹೋರಾಟಕ್ಕಾಗಿ ನಡೆದ ಭ್ರಷ್ಟಾಚಾರ ವಿರುದ್ಧ ಭಾರತ ಜನಾಂದೋಲನದಲ್ಲಿ ಸಕ್ರಿಯವಾಗಿ ಭಾಗವಹಿಸಿ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ ಸದಸ್ಯರಾಗಿರುವ ಸೀತಾರಾಮ್ ಗುಂಡಪ್ಪನವರು ಪಕ್ಷದ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

2018 ರಲ್ಲಿ ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಹಾಗೂ 2023ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದ ಸೀತಾರಾಮ್ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಇವರ ನೇಮಕವನ್ನು ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹಾಗೂ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಇಂದು ಘೋಷಿಸಿದರು.