ಆಷಾಢ:3 ದಿನ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ

Spread the love

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಜೂನ್ 27ರಿಂದ ಆಷಾಢ ಶುಕ್ರವಾರದ ಪೂಜೆ ಆರಂಭವಾಗಲಿದ್ದು, ವಾರದಲ್ಲಿ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಆಷಾಢ ಮಾಸದ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದರು.

ಈ ಕುರಿತು ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆಯ ಬಳಿಕ‌ ಅವರು ಮಾಹಿತಿ ನೀಡಿದರು.

ಹಾಗಾಗಿ ಸರ್ಕಾರಿ ಬಸ್ ಗಳಲ್ಲಿ ಉಚಿತ ಸೇವೆ ಒದಗಿಸಲಾಗುತ್ತಿದೆ. ಈ ಬಾರಿ 300 ರೂಪಾಯಿ ಸರದಿ ಸಾಲಿನ ಟಿಕೆಟ್ ಜೊತೆಗೆ ವಿಶೇಷ ಕ್ಯೂ ಸಿಸ್ಟಮ್ ಜಾರಿ ಮಾಡಲಾಗುತ್ತಿದೆ ಎಂದು ಹೇಳಿದರು.

2 ಸಾವಿರ ರೂಪಾಯಿಯ ಎಸಿ ಬಸ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಎಸಿ ಬಸ್ ಮೂಲಕ ವಿಶೇಷ ದರ್ಶನಕ್ಕೆ 2 ಸಾವಿರ ರೂ. ನಿಗದಿ ಮಡಲಾಗಿದೆ ಎಂದು ಮಹದೇವಪ್ಪ ತಿಳಿಸಿದರು.

ಸುದ್ದಿ ಗೋಷ್ಠಿಯಲ್ಲಿ ಶಾಸಕ ಜಿ.ಟಿ ದೇವೇಗೌಡ, ಡಿಸಿ ಲಕ್ಷ್ಮಿಕಾಂತ ರೆಡ್ಡಿ, ಪೋಲಿಸ್ ಕಮಿಷನರ್ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ್,ಡಾ.ಯತೀಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.