ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು 7 ಮಂದಿ ಮೃತಪಟ್ಟಿದ್ದಾರೆ.
ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ತಾಣಗಳನ್ನು ಗುರಿಯಾಗಿರಿಸಿಕೊಂಡು ಭಾರತ ಆಪರೇಷನ್ ಸಿಂಧೂರ ನಡೆಸಿದ ಬೆನ್ನಲ್ಲೇ ಪಾಕಿಸ್ತಾನ ಎಲ್‌ಒಸಿಯಲ್ಲಿ ಶೆಲ್ ದಾಳಿ ನಡೆಸಿದೆ ಎಂದು ಸೇನಾ ಮೂಲಗಳು ತಿಳಿಸಿವೆ
ಈ ವೇಳೆ ಏಳು ಮಂದಿ ಭಾರತೀಯ ನಾಗರಿಕರು ಮೃತಪಟ್ಟಿದ್ದು, ಶೆಲ್ ದಾಳಿಯಿಂದಾಗಿ ಹಲವಾರು ಮಂದಿ ಗಾಯಗೊಂಡಿದ್ದಾರೆ.