ಬೆಳಗಾವಿ: ಚಳಿಗಾಲದ ವಿಧಾನ ಮಂಡಲ ಅಧಿವೇಶನ ಮುಗಿದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಬಾಂಬ್ ಸಿಡಿಸಿದ್ದು,
ಸಂಚಲನವನ್ನೇ ಸೃಷ್ಟಿಸಿದೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಾನೇ ಶುಭ ಸುದ್ದಿ ನೀಡಿದ್ದೇನೆ. ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜ್ಯಕೀಯದಲ್ಲಿ ದೊಡ್ಡ ಬದಲಾವಣೆ ಯಾಗಲಿದೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ರಾಜ್ಯದ ನೂತನ ಮುಖ್ಯಮಂತ್ರಿಯಾಗುದು ಖಚಿತ!,ಈ ಬಗ್ಗೆ ಹೈಕಮಾಂಡ್ ದೊಡ್ಡ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಡಿ.ಕೆ.ಶಿವಕುಮಾರ್ ಅವರು ಕಳೆದ ಹಲವು ದಶಕಗಳಿಂದ ಪಕ್ಷವನ್ನು ಸಂಘಟಿಸಿದ್ದಾರೆ. ಈಗ ಅವರಿಗೊಂದು ಅವಕಾಶ ಬಂದಿದೆ, ಹಾಗಾಗಿ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಇಕ್ಬಾಲ್ ಹುಸೇನ್ ಸ್ಪಷ್ಟವಾಗಿ ನುಡಿದರು.
ಇಕ್ಬಾಲ್ ಹುಸೇನ್ ಅವರ ಈ ಹೇಳಿಕೆ ನಿಜಕ್ಕೂ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.ಜತೆಗೆ ಚರ್ಚೆಗೆ ಗ್ರಾಸ ಒದಗಿಸಿದೆ.
ಸೆಶೆನ್ ಮುಗಿದ ನಂತರ ಡಿಕೆಶಿ ಮುಖ್ಯ ಮಂತ್ರಿ: ಇಕ್ಬಾಲ್ ಹುಸೇನ್ ಬಾಂಬ್