ಅ ಕ ಬ್ರಾ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಎನ್ ಎಂ ನವೀನ್ ಕುಮಾರ್ ನೇಮಕ

Spread the love

ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರನ್ನಾಗಿ ಕಾಂಗ್ರೆಸ್ ಯುವ ಮುಖಂಡ
ಎನ್ ಎಂ ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ
ರಾಜ್ಯಾಧ್ಯಕ್ಷರಾದ ಎಸ್ ರಘುನಾಥ್ ಅವರು ಗುರುವಾರ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ.

ತಮ್ಮನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ನವೀನ್ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನವೀನ್ ಕುಮಾರ್ ಅವರು, ಮುಂದಿನ ದಿನಗಳಲ್ಲಿ ಮೈಸೂರಿನ ಸಮಸ್ತ ವಿಪ್ರರನ್ನು ಅದರಲ್ಲೂ ವಿಶೇಷವಾಗಿ ಯುವಕರನ್ನು ಒಗ್ಗೂಡಿಸಿ ಒಗಟ್ಟಿನಿಂದ ಸಂಘಟನೆ ಮಾಡುವುದಾಗಿ ತಿಳಿಸಿದರು.