ಯಾವುದೇ ವಸ್ತು ಖರೀದಿಸಿದರೂ ಕಡ್ಡಾಯವಾಗಿ ರಶೀದಿ ಪಡೆಯಿರಿ:ಚಂದ್ರಶೇಖರ್ ಸಲಹೆ

ಮೈಸೂರು: ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಪ್ರಯುಕ್ತ ಗ್ರಾಹಕರಿಗೆ ಜಾಗೃತಿ ಮೂಡಿಸಲಾಯಿತು.

ಮೈಸೂರಿನ ದೇವರಾಜ ಮಾರುಕಟ್ಟೆಯ ಚಿಕ್ಕ ಗಡಿಯಾರ ಮುಂಭಾಗ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ಗ್ರಾಹಕರಿಗೆ ಗ್ರಾಹಕರ ಕಾಯ್ದೆಗಳ ಬಗ್ಗೆ ಬಿತ್ತಿಪತ್ರ ಹಿಡಿದು, ಕರಪತ್ರ ನೀಡಿ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಮಾತನಾಡಿದ
ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಸಿ. ಎಸ್ ಚಂದ್ರಶೇಖರ್,ಗ್ರಾಹಕರು ಯಾವುದೇ ವಸ್ತು ಖರೀದಿ ಮಾಡುವಾಗ ರಶೀದಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಹಾಗೂ ಅದರ ಸೀಮಿತ ಅವಧಿಯನ್ನು ಪರಿಶೀಲಿಸಬೇಕು ತಿಳಿಹೇಳಿದರು.

ಪ್ರತಿಯೊಬ್ಬರು ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು,ಅದೇ ರೀತಿ ಎಲ್ಲರೂ ಮಕ್ಕಳಿಗೆ ಗ್ರಾಹಕ ಹಕ್ಕುಗಳ ಬಗ್ಗೆ ತಿಳುವಳಿಕೆಯನ್ನು ನೀಡಬೇಕು ಎಂದು ಸಲಹೆ ನೀಡಿದರು.

ಗ್ರಾಹಕರ ಹಿತಕ್ಕಾಗಿ ಕೆಲಸ ಮಾಡುವ ಸಂಸ್ಥೆಗಳು ರಾಜ್ಯ ಮತ್ತು ಕೇಂದ್ರ ಸರಕಾರಗಳ ಯೋಜನೆ ಕುರಿತು ಗ್ರಾಹಕರಿಗೆ ಅರಿವು ಮೂಡಿಸಬೇಕು. ಗೃಹ ಬಳಕೆ ವಸ್ತುಗಳನ್ನು ಖರೀದಿಸುವಾಗ ಅಥವಾ ಪಡೆದ ಸೇವೆಗಳಿಗಾಗಿ ತಪ್ಪದೇ ರಸೀದಿ ಪಡೆದುಕೊಳ್ಳಬೇಕು ಎಂದು ಚಂದ್ರಶೇಖರ್ ತಿಳಿಸಿದರು.

ಜಾಗೃತಿ ಕಾರ್ಯಕ್ರಮದಲ್ಲಿ ಹಿರಿಯ ಗ್ರಾಹಕ ಪಂಚಾಯತ್ ಸದಸ್ಯರಾದ ಟಿ.ಸಿ ರಂಗನಾಥ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಮಹಿಳಾ ಪ್ರಮುಖ್ ನಾಗಮಣಿ ಜೆ, ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ದರ್ಶನ್ ಮೂರ್ತಿ ಕೆ,
ಸುಚಿಂದ್ರ,ಆಲನಹಳ್ಳಿ ಎಂ ಎನ್ ಚೇತನ್ ಗೌಡ, ಸಚಿನ್ ನಾಯಕ್, ಆನಂದ್ ದಯಾನಂದ್, ಮಹಾನ್ ಶ್ರೇಯಸ್ ಮತ್ತಿತರರು ಹಾಜರಿದ್ದರು.