ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿಗಳಿಂದ ಬಿರುಸಿನ ಪ್ರಚಾರ

Spread the love

ಮೈಸೂರು, ಏ.4: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ ಏಪ್ರಿಲ್ 13ರಂದು ಏಕಕಾಲಕ್ಕೆ ರಾಜ್ಯಾದ್ಯಂತ ನಡೆಯಲಿದ್ದು,ಮೈಸೂರು ಜಿಲ್ಲಾ ಪ್ರತಿನಿಧಿಗಳು ಬಿರುಸಿನ ಮತಯಾಚನೆ ಮಾಡಿದರು.

ಈ ಚುನಾವಣೆಯಲ್ಲಿ
ಹಾಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯಾಧ್ಯಕ್ಷ ಅಶೋಕ್ ಹಾರನಹಳ್ಳಿ ಬೆಂಬಲಿತ ಅಭ್ಯರ್ಥಿ
ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಡಾ. ಭಾನುಪ್ರಕಾಶ್ ಶರ್ಮ
ಹಾಗೂ ಮೈಸೂರಿನ 2 ಜಿಲ್ಲಾಪ್ರತಿನಿಧಿ ಸ್ಥಾನಕ್ಕೆ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಹಾಗೂ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಕಡಕೋಳ ಜಗದೀಶ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಅಗ್ರಹಾರದ ಶಂಕರ ಮಠದಲ್ಲಿ ಶಾರದಾಂಬೆಗೆ ಪೂಜೆ ಸಲ್ಲಿಸಿ ನಂತರ ಬಿರುಸಿನ ಪ್ರಚಾರ ಪ್ರಾರಂಭಿಸಲಾಯಿತು.

ಈ ವೇಳೆ ಮಾತನಾಡಿದ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್ ಅವರು,
ಡಾ. ಭಾನುಪ್ರಕಾಶ್ ಶರ್ಮಾ ಅವರು ಕಳೆದ 30 ವರ್ಷಗಳಿಂದ ವಿವಿಧ ಸಂಸ್ಥೆಗಳ ಪದಾಧಿಕಾರಿಗಳಿಗಾಗಿ, ಎಕೆಬಿಎಂಎಸ್‌ನಲ್ಲಿ 3 ಬಾರಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.

ವಿಶ್ವಹಿಂದು ಪರಿಷತ್‌ನೊಂದಿಗೆ ಗುರುತಿಸಿ ಕೊಂಡಿದ್ದಾರೆ. ವಿಪ್ರರ ಸೇವೆಯನ್ನೇ ಪ್ರಮುಖ ಎಂದು ತಿಳಿದುಕೊಂಡಿದ್ದಾರೆ. ಧರ್ಮಜಾಗೃತಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಹೀಗೆ ಹಲವು ಸಮಾಜಮುಖಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತನ್ನದೇ ಆದ ಕೊಡುಗೆ ನೀಡಿದ್ದಾರೆ ಎಂದು ಬಣ್ಣಿಸಿದರು.

ಧರ್ಮ, ಗೋಸಂರಕ್ಷಣೆ ವಿಚಾರದಲ್ಲಿ ಅನೇಕ ಗೋಷ್ಠಿಗಳನ್ನು ಮಾಡಿದ್ದಾರೆ. ಮೈಸೂರು ರಾಜ ಮನೆತನದ ವಿವಿಧ ಧಾರ್ಮಿಕ ಕಾರ್ಯಕ್ರಮ ಗಳನ್ನು ಮಾಡಿದ್ದಾರೆ.1995 ರಲ್ಲಿ ಶ್ರೀ ರಂಗಪಟ್ಟಣದಲ್ಲಿ ಅತಿರುದ್ರ ಮಹಾಯಾಗ ಮಾಡಿ ಯಶಸ್ವಿಯಾಗಿದ್ದಾರೆ, ಕೈಲಾಸ ಮಾನಸ ಸರೋವರದಲ್ಲಿ ಅತಿರುದ್ರ ಮಹಾಯಾಗ ಯಶಸ್ವಿಯಾಗಿ ಮಾಡಿ ದ್ದಾರೆ. ಹಲವಾರು ಸಂಸ್ಥೆಗಳ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿಸಿದರು.

ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪಾಯಿ, ವಿಪ್ರ ಜಾಗೃತಿ ವೇದಿಕೆಯ ಅಧ್ಯಕ್ಷರಾದ ನಾಗರಾಜು, ಮುಳ್ಳೂರು ಸುರೇಶ್,
ಅಜಯ್ ಶಾಸ್ತ್ರಿ, ಜಯಸಿಂಹ, ವಿಜಯ್ ಕುಮಾರ್, ಸುಚೇಂದ್ರ, ನಾಗೇಂದ್ರ ಬಾಬು, ಚಕ್ರಪಾಣಿ, ಮಹೇಶ್ ಕುಮಾರ್, ಜ್ಯೋತಿ,ರಶ್ಮಿ, ಶ್ರೀನಾಥ್, ಲತಾ ಬಾಲಕೃಷ್ಣ, ನಾಗಶ್ರೀ, ಮಂಜುನಾಥ್ ಮತ್ತಿತರರು ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದರು.