ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಶಿವರಾಜು ಅವರು ಮಾರ್ಗದರ್ಶನ ನೀಡಿದರು.
ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ನೀರಿನ ಶುದ್ಧತೆಯ ಬಗ್ಗೆ ಹಾಗೂ ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
