ಇರಾನ್, ಮಾ1: ಇಸ್ರೇಲ್ ಹಾಗೂ ಅಮೆರಿಕ ಇರಾನ್ ಮೇಲೆ ಯುದ್ದ ಸಾರಿದ್ದು,ವೈಮಾನಿಕ ದಾಳಿ ವೇಳೆ ಇರಾನ್ ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಮೇನಿ ಮೃತಪಟ್ಟಿದ್ದಾರೆ.
ಅಮೆರಿಕ-ಇಸ್ರೇಲ್ ದಾಳಿಯಲ್ಲಿ 200 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.ಇಡೀ ಇರಾನ್ ನಲ್ಲಿ ಅರಾಜಕತೆ ಸೃಷ್ಟಿಯಾಗಿದೆ.ಖಮೇನಿ ಜತೆಯಲ್ಲೇ ಇರಾನ್ ನ ರಕ್ಷಣಾ ಸಚಿವ ಸೇರಿದಂತೆ ಪ್ರಮುಖ ನಾಯಕರು ಬಲಿಯಾಗಿದ್ದಾರೆ.
ಇರಾನ್ ಈ ದಾಳಿಗಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಪ್ರತಿಜ್ಞೆ ಮಾಡಿದೆ. ಈಗಾಗಲೇ ಅಬುದಾಬಿ,ದುಬೈ ಸೇರಿದಂತೆ ಇತರೆ ಪ್ರದೇಶದಲ್ಲಿನ ಅಮೆರಿಕದ ನೆಲೆಗಳನ್ನು ಗುರಿಯಾಗಿಸಿ ದಾಳಿ ಮುಂದುವರಿಸಿದೆ.
ದುಬೈನ ಅಮೇರಿಕಾ ಗುಪ್ತಚರ ಕೇಂದ್ರವನ್ನು ಧ್ವಂಸಗೊಳಿಸಲಾಗಿದೆ.
ನೀವು ಸೀಮಾರೇಖೆಯನ್ನು ದಾಟಿದ್ದೀರಿ ಇದಕ್ಕೆ ಪ್ರತೀಕಾರ ತೆಗೆದುಕೊಳ್ಳುತ್ತೇವೆ ಎಂದು ಕಠಿಣ ಎಚ್ಚರಿಕೆ ನೀಡಿದೆ.
ಅಮೇರಿಕಾದ ಅಧ್ಯಕ್ಷ ಟ್ರಂಪ್ ಕೂಡಾ ಇರಾನ್ ಗೆ ಎಚ್ಚರಿಕೆ ನೀಡಿದ್ದಾರೆ.ಸಮರ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
