ವಾಷಿಂಗ್ಟನ್: ಅಮೆರಿಕ ಹಾಗೂ ವೆನೆಜುವೆಲಾದ ನಡುವೆ ಯುದ್ಧ ಪ್ರಾರಂಭವಾಗುವ ಎಲ್ಲಾ ಲಕ್ಷಣ ಗೋಚರವಾಗಿದ್ದು,ಶನಿವಾರ ಮುಂಜಾನೆ ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್ನ ಕೆಲವು ಕಡೆ ಸ್ಫೋಟ ಸಂಭವಿಸಿದೆ.
ಮಿಲಿಟರಿ ನೆಲೆಯ ಬಳಿ ದಾಳಿ ಸಂಭವಿಸಿದೆ ರಾಜಧಾನಿಯಲ್ಲಿ ಕನಿಷ್ಠ 7 ಸ್ಫೋಟಗಳ ಶಬ್ದಗಳು ಕೇಳಿಬಂದಿದ್ದು, ವಿಮಾನಗಳು ಕೆಳಮಟ್ಟದಲ್ಲಿ ಹಾರುತ್ತಿರುವುದು ಕಂಡುಬಂದಿದೆ.
ದಾಳಿಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಯುದ್ದದ ಭೀತಿಗೆ ಪುಷ್ಟಿ ನೀಡಿದೆ.
ರಾಜಧಾನಿಯ ಹಲವಾರು ಭಾಗಗಳಲ್ಲಿ ಗುಂಡಿನ ಸದ್ದು ಕೇಳಿಬಂದಿದೆ ಎಂದು ನಿವಾಸಿಗಳು ಹೇಳಿದ್ದಾರೆ. ಈ ದಾಳಿಯನ್ನು ಅಮೆರಿಕ ಖಚಿತಪಡಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವೆನೆಜುವೆಲಾದೊಳಗಿನ ಮಿಲಿಟರಿ ಸೌಲಭ್ಯಗಳು ಸೇರಿದಂತೆ ವಿವಿಧೆಡೆ ದಾಳಿ ಮಾಡಲು ಆದೇಶಿಸಿದ್ದಾರೆ ಎಂದು ಅಮೆರಿಕದ ಅಧಿಕಾರಿಗಳು ತಿಳಿಸಿದ್ದಾರೆ.
ಕನಿಷ್ಠ 7 ದೊಡ್ಡ ಸ್ಫೋಟಗಳು ಸಂಭವಿಸಿದ್ದು ರಾಜಧಾನಿಯಲ್ಲಿ ಈಗ ವಿದ್ಯುತ್ ಕಡಿತಗೊಂಡಿದೆ. ಹಲವು ಯುದ್ಧ ವಿಮಾನಗಳನ್ನು ಬಳಸಿ ಅಮೆರಿಕ ಈ ದಾಳಿ ನಡೆಸಿದೆ.
ವೆನೆಜುವೆಲಾದ ರಕ್ಷಣಾ ಸಚಿವ ವ್ಲಾಡಿಮಿರ್ ಪ್ಯಾಡ್ರಿನೊ ಲೋಪೆಜ್ ಅವರ ಮನೆಯನ್ನು ಗುರಿಯಾಗಿಸಿಕೊಂಡು ವೈಮಾನಿಕ ದಾಳಿ ನಡೆದಿದೆ.
ರಾಜಧಾನಿ ಕ್ಯಾರಕಾಸ್ನ ಉತ್ತರದಲ್ಲಿರುವ ಲಾ ಗುಯಿರಾ ಬಂದರು ಮೇಲೆಯೂ ಬಾಂಬ್ ದಾಳಿ ನಡೆದಿದೆ. ದಕ್ಷಿಣ ಭಾಗದಲ್ಲಿ ಪ್ರಮುಖ ಮಿಲಿಟರಿ ನೆಲೆಯ ಬಳಿಯೂ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು ಭಾರೀ ಪ್ರಮಾಣದ ಹಾನಿಯಾಗಿರುವ ಸಂಭವ ಇದೆ ಎಂದು ಹೇಳಲಾಗಿದೆ.
ವೆನೆಜುವೆಲಾದ ಅಧ್ಯಕ್ಷ ಮಡುರೊ ಮತ್ತು ಅವರ ಪತ್ನಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅಮೆರಿಕಾ ಅಧ್ಯಕ್ಷ ಟ್ರಂಪ್ ಹೇಳಿಕೊಂಡಿದ್ದಾರೆ
