ಆಂಧ್ರಪ್ರದೇಶ: ಆಂದ್ರ ಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿ 6 ಮಂದಿ ಮೃತಪಟ್ಟಿದ್ದಾರೆ.
ರಾಯವರಂ ಮಂಡಲದ ಕೊಮಾರಿಪಲೇಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಲ್ಲಿ ಈ ಘಟನೆ ಸಂಭವಿಸಿದೆ.
ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಜನರು ಸಾವನ್ನಪ್ಪಿದ್ದು, ಎಂಟು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ
ಪಟಾಕಿ ಉತ್ಪಾದನೆಯಲ್ಲಿ ಬಳಸುವ ಹೆಚ್ಚು ದಹಿಸುವ ರಾಸಾಯನಿಕಗಳಿಂದಾಗಿ ಬೆಂಕಿ ವೇಗವಾಗಿ ಹರಡಿದೆ.
ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.
ಪೊಲೀಸ್, ಕಂದಾಯ ಅಧಿಕಾರಿಗಳು, ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿ, ಅಧಿಕಾರಿಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದರು.