ಮೈಸೂರು: ಹನುಮ ಜಯಂತಿ ಪ್ರಯುಕ್ತ ಮೈಸೂರಿನ ಜೆಎಸ್‌ಎಸ್ ವಿದ್ಯಾಪೀಠದ ಎದುರು ಇರುವ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ವಿಜಯನಗರದ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅವರು ಪೂಜಾ-ಕೈಂಕರ್ಯಗಳನ್ನು ನೆರವೇರಿಸಿ ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಿದರು.
ನೂರಾರು ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದರು.
