ಮಂಡ್ಯ: ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಕನಮರಡಿ ಗ್ರಾಮದ ಶ್ರೀ ಅಂಕನಾಥೇಶ್ವರಸ್ವಾಮಿ ದೇವಾಲಯವನ್ನು ಮರುನಿರ್ಮಾಣ ಮಾಡಲಾಗಿದ್ದು ಲೋಕಾರ್ಪಣೆ ಮಾಡಲಾಯಿತು.

ಶ್ರೀ ಆದಿಚುಂಚನಗಿರಿ ಮಠದ ಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ದೇವಾಲಯ ಲೋಕಾರ್ಪಣೆ ಗೊಳಿಸಲಾಯಿತು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂಕನಾಥೇಶ್ವರಸ್ವಾಮಿ ದೇವಾಲಯವನ್ನು ಲೋಕಾರ್ಪಣೆ ಮಾಡಿ ಸ್ವಾಮಿಯ ದರ್ಶನ ಪಡೆದರು.
ಈ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡರು ಹಾಗೂ ಗ್ರಾಮದ ಮುಖಂಡರು, ಭಕ್ತರು ಉಪಸ್ಥಿತರಿದ್ದರು.