ಹುಣಸೂರು: ಹುಣಸೂರಿನಲ್ಲಿ ಇಂದು ಪೊಲೀಸ್ ಇಲಾಖೆ ವತಿಯಿಂದ ಮಾದಕ ದ್ರವ್ಯ ವಿರೋಧಿ ದಿನ ಆಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ಹುಣಸೂರು ಡಿವೈಎಸ್ಪಿ ಗೋಪಾಲಕೃಷ್ಣ ಅವರ ನೇತೃತ್ವದಲ್ಲಿ ನಡೆದ ಈ ಜಾಥಾದಲ್ಲಿ ಹುಣಸೂರು ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್,ಪಿಎಸ್ಐ ಗಳಾದ ತ್ಯಾಗರಾಜ ನಾಯಕ, ನಾಗಯ್ಯ ಹಾಗೂ ಹುಣಸೂರು ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳ ಎಲ್ಲ ಸಿಬ್ಬಂದಿ ಪಾಲ್ಗೊಂಡಿದ್ದರು.
ಜಾಥಾದಲ್ಲಿ ಹುಣಸೂರಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡು ಪೊಲೀಸರಿಗೆ ಸಾಥ್ ನೀಡಿದರು.
ಹುಣಸೂರು ಪಟ್ಟಣ ಮತ್ತು ಗ್ರಾಮಾಂತರದಿಂದ ಬಹಳಷ್ಟು ಸಾರ್ವಜನಿಕರು ಮತ್ತು ಕರ್ನಾಟಕ ಪ್ರಜಾ ಪಾರ್ಟಿ ರೈತ ಪರ್ವ ಪದಾಧಿಕಾರಿಗಳು ಹಾಗೂ ಹುಣಸೂರು ತಾಲೂಕು ಅಧ್ಯಕ್ಷ ಚೆಲುವರಾಜು ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಹೊರಟ ಜಾಥಾ ಕಲ್ಪತರು ಮೈದಾನದಲ್ಲಿ ಕೊನೆಗೊಂಡಿತು.
ಈ ವೇಳೆ ಪೊಲೀಸರು ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ಜನರಿಗೆ ತಿಳಿಸಿಕೊಟ್ಟರು.