ನಾಳೆ ಅ ಕ ಬ್ರಾ ಮಹಾಸಭಾ ನೂತನ ರಾಜ್ಯ ಪದಾಧಿಕಾರಿಗಳಿಗೆ ಅಭಿನಂದನೆ

Spread the love

ಮೈಸೂರು: ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಪದಾಧಿಕಾರಿಗಳಾಗಿ ನೇಮಕಗೊಂಡ ವಿವಿಧ ಪದಾಧಿಕಾರಿಗಳಿಗೆ ಮೇ.7ರಂದು ಅಭಿನಂದನಾ‌ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಭಿನಂದನಾ ಸಮಾರಂಭದ ಜೊತೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾಗೆ ನೂತನ ಸದಸ್ಯತ್ವ ಪಡೆದ ಸದಸ್ಯರಿಗೆ ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವನ್ನು ಕೃಷ್ಣಮೂರ್ತಿಪುರಂನ ಶ್ರೀರಾಮಮಂದಿರದಲ್ಲಿ ನಾಳೆ ಸಂಜೆ 5.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಅಧ್ಯಕ್ಷ ಹೆಚ್‌. ಎನ್ ಶ್ರೀಧರಮೂರ್ತಿ ತಿಳಿಸಿದ್ದಾರೆ.

ವಿಪ್ರ ಸಂಘ ಸಂಸ್ಥೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ಹೆಚ್‌. ಎನ್ ಶ್ರೀಧರಮೂರ್ತಿ ಮನವಿ ಮಾಡಿದ್ದಾರೆ.