ಪೌರಕಾರ್ಮಿಕರಿಗೆ ಎಳ್ಳು ಬೆಲ್ಲ ವಿತರಿಸಿ ಸಂಕ್ರಾಂತಿ ಶುಭ ಹಾರೈಕೆ

ಮೈಸೂರು: ನಗರದ ಚಾಮುಂಡಿಪುರಂ, ಅಪೂರ್ವ ಹೋಟೆಲ್ ಬಳಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಮಕರ ಸಂಕ್ರಾಂತಿ ಅಂಗವಾಗಿ ಪೌರಕಾರ್ಮಿಕರಿಗೆ ಎಳ್ಳು ಬೆಲ್ಲ ವಿತರಿಸಿ ಶುಭ ಕೋರಲಾಯಿತು.

ಈ ವೇಳೆ ನಗರ ಪಾಲಿಕೆ ಮಾಜಿ ಸದಸ್ಯ ಮ ವಿ ರಾಮಪ್ರಸಾದ್, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,ವಾರ್ಡ್ ಹಿರಿಯ ಆರೋಗ್ಯ ನಿರೀಕ್ಷಕರಾದ
ಶಿವಪ್ರಸಾದ್, ಸ್ವಚ್ಛತಾ ಮೇಲ್ವಿಚಾರಕ ಶಂಕರ್, ದೂರ ರಾಜಣ್ಣ, ಶ್ರೀಕಾಂತ್ ಕಶ್ಯಪ್, ರಾಕೇಶ್, ಜೇಟ್ಟಿ ಪ್ರಸಾದ್, ಆದರ್ಶ್, ಮಹಾದೇವಸ್ವಾಮಿ, ಶಿವಲಿಂಗ ಸ್ವಾಮಿ, ಮತ್ತಿತರರು ಹಾಜರಿದ್ದರು.