ಮೈಸೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರುದೇವ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಹುಟ್ಟು ಹಬ್ಬ ಸಂಭ್ರಮಾಚರಣೆ ಅಂಗವಾಗಿ ತೆರೆಮರೆಯ ಸಾಧಕ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಜೂನ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಕೆ ಆರ್ ಪೇಟೆ ತಾಲೂಕಿನ ಖ್ಯಾತ ವೈದ್ಯರಾದ ಆರ್ ಟಿ ವೆಂಕಟೇಶ್ ಹಾಗೂ ಮಡಿಕೇರಿಯ ಖ್ಯಾತ ಪತ್ರಕರ್ತರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರಿಗೆ ತೆರೆ ಮರೆಯ ಸಾಧಕ ಪ್ರಶಸ್ತಿ ನೀಡಲಾಗುತ್ತಿದೆ.
ಜೂ 14ರ ಭಾನುವಾರ ಸಂಜೆ 5 ಗಂಟೆಗೆ ಚಾಮುಂಡಿ ಬೆಟ್ಟದ ತಪಲಿನಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಮಿತಿ ಸದಸ್ಯರಾದ ಅಪೂರ್ವ ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಎನ್ ಕೆ ಲೋಕನಾಥ್, ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ ಹಾಗೂ ದೇವರತ್ನ ಫೌಂಡೇಶನ್ ಸಂಸ್ಥಾಪಕರಾದ ಶಿವಪ್ರಸಾದ್ ಎಂ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೌಶಿಕ ಸ್ವಾಮೀಜಿ ಹಾಗೂ ದಿವ್ಯಪಾದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
