15 ಲಕ್ಷ ರೂಪಾಯಿ ಏನಾಯ್ತು – ಡಿಕೆಶಿಗೆ ಅಶೋಕ್ ಪ್ರಶ್ನೆ

Spread the love

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಬಿಬಿಎಂಪಿ ವ್ಯಾಪ್ತಿಯ ಪ್ರತಿ ವಾರ್ಡ್ ಗೆ ತಲಾ 15 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರಲ್ಲ ಆ ಹಣವೆಲ್ಲಾ ಏನಾಯ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅಶೋಕ್,
ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಸಚಿವ ಶ್ರೀ ಡಿ.ಕೆ.ಶಿವಕುಮಾರ್ ಅವರೇ ಎಂದು ವ್ಯಂಗ್ಯ ವಾಗಿ ಬರೆದಿದ್ದು,
ಬೆಂಗಳೂರಿನ ಉದ್ದಗಲಕ್ಕೂ ಬಾಯ್ತೆರೆದಿರುವ ಯಾಮಸ್ವರೂಪಿ ರಸ್ತೆ ಗುಂಡಿಗಳನ್ನು ನೋಡಿದರೆ ಬಹುಶಃ ಆ ದುಡ್ಡೆಲ್ಲವೂ ತಮ್ಮ ಕಮಿಷನ್ ಪಾಲಾದಂತಿದೆ ಅಥವಾ ಈಗ ಚನ್ನಪಟ್ಟಣ ಚುನಾವಣೆ ಖರ್ಚಿಗೆ ಆ ಹಣ ಸಾಗಿಸಿದ್ದೀರೋ ಎಂದು ಪ್ರಶ್ನಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಕಟ್ಟುವುದು ದೂರದ ಮಾತು ಸ್ವಾಮಿ, ಮೊದಲು ರಸ್ತೆ ಗುಂಡಿ ಮುಚ್ಚಿಸಿ ಜನರ ಪ್ರಾಣ ಉಳಿಸಿ ಎಂದು ಆಗ್ರಹಿಸಿದ್ದಾರೆ.