ಮೈಸೂರು: ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಆಗಸ್ಟ್ 13 ರಂದು ಹಮ್ಮಿಕೊಂಡಿರುವ ಕರ್ನಾಟಕ ಬಂದ್ ಪೂರ್ಭಾವಿಯಾಗಿ ಇಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.
ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮೈಸೂರಿನ ಆರ್ ಗೇಟ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತಾಡಿದ ವಾಟಾಳ್ ನಾಗರಾಜ್, ಇದೆ 13 ರಂದು ಹಮ್ಮಿಕೊಂಡಿರುವ ಕರ್ನಾಟಕ ಬಂಧ್ ಅನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ ಬಂದ್ ಮಾಡಿಯೇ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಒಂದು ಹನಿ ನೀರನ್ನು ಬಿಡಬಾರದು ಎಂದು
ವಾಟಾಳ್ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಾರ್ಥಸಾರಥಿ , ಮೂಗೂರು ನಂಜುಂಡಸ್ವಾಮಿ, ತೇಜೇಶ್ ಲೋಕೇಶ್ ಗೌಡ, ಗೋಪಿನಾಥ್, ಹನುಮಂತಯ್ಯ, ಪ್ರಭಾಕರ್, ಶಿವರಾಂ, ವಿಜಯೇಂದ್ರ, ಜಿಯಾ, ರಾಧಾಕೃಷ್ಣ , ರವೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
