ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಕಾನೂನು ಹೋರಾಟ – ಯದುವೀರ್

ಮೈಸೂರು: ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ಟ್ ತಡೆಯಾಜ್ಞೆ ಇದ್ದರೂ ಪ್ರಾಧಿಕಾರದ ಸಭೆ ಮಾಡಿದ್ದಾರೆ,ಆ ಸಭೆಗೆ ನಾನು ಭಾಗವಹಿಸಿಲ್ಲ,ಇವರು ಮಾಡುತ್ತಿರುವ ಸಭೆ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದಂತಾಗುತ್ತದೆ ಎಂದು ಹೇಳಿದರು.

ಸೆಪ್ಟಂಬರ್ 5 ರವರೆಗೂ ಕೋರ್ಟ್ ತಡೆಯಾಜ್ಞೆ ಆದೇಶ ನೀಡಿದೆ. ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗಲು ಸೂಚಿಸಿದೆ,ಮುಂದಿನ ದಿನಗಳಲ್ಲಿ ನಾವು ಕಾನೂನಿನ ಹೋರಾಟ ಮುಂದುವರಿಸುತ್ತೇವೆ. ಪ್ರಾಧಿಕಾರವನ್ನ ವಿರೋಧಿಸಿ ನ್ಯಾಯಾಲಯದಲ್ಲಿ ನಾವು ಚಾಲೆಂಜ್ ಮಾಡುತ್ತೇವೆ‌. ದೇವಾಲಯ, ಮಸೀದಿ, ಚರ್ಚ್ ಗಳಿಗೆ ಪ್ರಾಧಿಕಾರ ಮಾಡುವುದು ಸೂಕ್ತ ಅಲ್ಲ ಎಂದು ತಿಳಿಸಿದರು.

ಪ್ರಾಧಿಕಾರ ರಚನೆಯಿಂದ ನಮ್ಮ ಮೂಲ ಧಾರ್ಮಿಕ ನಂಬಿಕೆ, ಹಕ್ಕುಗಳಿಗೆ ಧಕ್ಕೆ ಉಂಟಾಗುತ್ತದೆ. ನಾವು ಧಾರ್ಮಿಕ ಹಕ್ಕುಗಳನ್ನು ಯಾರಿಗೂ ಬಿಟ್ಟು ಕೊಟ್ಟಿಲ್ಲ. ಅದರ ಬಗ್ಗೆ ನಾವು ಹೋರಾಟ ಮಾಡುತ್ತೇವೆ.

ಜನಪ್ರತಿನಿಧಿಯಾಗಿ ಮುಂದುವರಿಯುವ ಜೊತೆಗೆ ನಮ್ಮ ಧರ್ಮ, ನಂಬಿಕೆ, ಹಕ್ಕು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾನೂನಾತ್ಮಕ ಹೋರಾಟ ಮಾಡುತ್ತೇವೆ‌. ದೇವಾಲಯ ಹುಂಡಿ ಹಣ ದೇವಾಲಯಗಳಿಗೆ ಬಳಕೆ ಆಗಬೇಕು ಎಂದು ಯದುವೀರ್ ಹೇಳಿದರು.

ಚಾಮುಂಡೇಶ್ವರಿ ಪ್ರಾಧಿಕಾರ ವಿರೋಧಿಸಿ ಕಾನೂನು ಹೋರಾಟ – ಯದುವೀರ್ Read More

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ

ಮೈಸೂರು: ಭಾರತೀಯ ಜನತಾ ಪಕ್ಷ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ ಎಂದು ಬಿಜೆಪಿ ನಗರಾಧ್ಯಕ್ಷ ಎಲ್ ನಾಗೇಂದ್ರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಅಭಿಯಾನದ ಕಾರ್ಯಗಾರದಲ್ಲಿ ಮಾತನಾಡಿದ ಅವರು
ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿ ಎಂದು ತಿಳಿಸಿದರು.

ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿರುವ ಬಿಜೆಪಿಯ ಸದಸ್ಯತ್ವ ಪಡೆಯುವುದೇ ಹೆಮ್ಮೆಯ ಸಂಗತಿ,
ಕಾರ್ಯಕರ್ತರು ಪ್ರತಿ ಬೂತಿನಲ್ಲೂ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಬೇಕು
ಎಂದು ಸಲಹೆ ನೀಡಿದರು.

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕರಾಜ್, ಪ್ರಧಾನ ಕಾರ್ಯದರ್ಶಿ ಗಳಾದ ಗಿರೀಧರ್, ಬಿ ಎಂ ರಘು, ಉಪಾಧ್ಯಕ್ಷ ರಮೇಶ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯೆ ಟಿ ಎನ್ ಶಾಂತ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಕಲಾ, ಸದಸ್ಯತ್ವ ಅಭಿಯಾನದ ಸಂಚಾಲಕಿ ವಿಧ್ಯಾಅರಸ್, ಕಾರ್ಯದರ್ಶಿ ನಾಗೇಂದ್ರ,
ಸಹಾ ಸಂಚಾಲಕ ಜಾನ್ಸಿ ಹಾಗೂ ಅನಿತ ಮತ್ತು ಮಹಿಳಾ ಮೋರ್ಚಾ ಕ್ಷೇತ್ರಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು

ಬಿಜೆಪಿಯಿಂದ ಸಮರ್ಥ ಆಡಳಿತ – ಎಲ್ ನಾಗೇಂದ್ರ Read More

ಎಂ.ಜೆ ಸೂರ್ಯನಾರಾಯಣ್ ಗೆ ಶುಭ ಹಾರೈಕೆ

ಮೈಸೂರು: ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ನೌಕರ ಎಂ.ಜೆ ಸೂರ್ಯನಾರಾಯಣ್ ನಿವೃತ್ತರಾದ ಹಿನ್ನೆಲೆಯಲ್ಲಿ ಅವರನ್ನು ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್. ಮೂರ್ತಿ ಅವರು ಸನ್ಮಾನಿಸಿ ಶುಭ ಹಾರೈಸಿದರು.

ಈ ವೇಳೆ ಆರ್. ಮೂರ್ತಿ ಅವರು ಮಾತನಾಡಿ, ಮೈಸೂರು ದಸರಾ ವಸ್ತುಪ್ರದರ್ಶನ ದೊಡ್ಡಕೆರೆ ಮೈದಾನದಲ್ಲಿ ನಿರಂತರವಾಗಿ ನಡೆಯಬೇಕೆಂದು ಕರ್ನಾಟಕ ಸರ್ಕಾರ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರ ರಚಿಸಿತು ಅದಕ್ಕೆ ಪ್ರಪ್ರಥಮ ಅಧ್ಯಕ್ಷನಾಗಿ ನಾನು ಅಧಿಕಾರ ವಹಿಸಿಕೊಂಡು ಕಾರ್ಯಚಟುವಟಿಕೆ ಪ್ರಾರಂಭಿಸಿದೆ ಎಂದು ಸ್ಮರಿಸಿದರು.

40ವರ್ಷಗಳಿಂದ ಪ್ರಾಧಿಕಾರದಲ್ಲಿ ದುಡಿದು ನಿವೃತ್ತಿಯಾಗುತ್ತಿರುವ ಪ್ರಾಧಿಕಾರದ ಕೊನೆಯ ಸರ್ಕಾರಿ ನೌಕರ ಎಂ.ಜೆ ಸೂರ್ಯನಾರಾಯಣ್ ಅಧಿಕಾರಿಗಳೊಂದಿಗೆ ಆಪ್ತ ಸಹಾಯಕರಾಗಿ ಉತ್ತಮ ಕೆಲಸ ಮಾಡಿದ್ದಾರೆ, ಅವರ ನಿವೃತ್ತಿ ಜೀವನದ ದಿನಗಳು ಸಂತೋಷದಾಯಕ ವಾಗಿರಲಿ ಎಂದು ಶುಭ ಹಾರೈಸಿದರು

ಈ ಸಂಧರ್ಭದಲ್ಲಿ ಪ್ರಾಧಿಕಾರದ ಕಾರ್ಯನಿರ್ವಾಹಣಾಧಿಕಾರಿ ಕೆ.ರುದ್ರೇಶ್, ಕೆಪಿಸಿಸಿ ಸದಸ್ಯ ನಜರಬಾದ್ ನಟರಾಜ್, ಗಿರೀಶ್, ಸಿಎಸ್. ರಘು, ಕೆ‌ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜು ಬಸಪ್ಪ, ನಿರೂಪಕ ಅಜಯ್ ಶಾಸ್ತ್ರಿ, ವಿನಯ್ ಕಣಗಾಲ್, ರಂಗಸ್ವಾಮಿ ಪಾಪು, ಗುರುರಾಜ್ ಹಾಜರಿದ್ದರು.

ಎಂ.ಜೆ ಸೂರ್ಯನಾರಾಯಣ್ ಗೆ ಶುಭ ಹಾರೈಕೆ Read More

ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಸಿದ ಚಿಣ್ಣರು

ಮೈಸೂರು:ಮಂಚೇಗೌಡನ ಕೊಪ್ಪಲು ಸರ್ಕಾರಿ ಶಾಲೆಯಲ್ಲಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಜೀವ ಗಣೇಶ ಮೂರ್ತಿಗಳನ್ನು ತಯಾರಿಸುವಲ್ಲಿ ಮಕ್ಕಳು ಉತ್ಸಾಹದಿಂದ‌‌ ಪಾಲ್ಗೊಂಡರು.

ಶ್ರೀ ದುರ್ಗಾ ಫೌಂಡೇಶನ್ ಮಂಚೇಗೌಡನ ಕೊಪ್ಪಳಿನಲ್ಲಿರುವ ಸರ್ಕಾರಿ ಪ್ರೌಢಶಾಲೆ ಮಕ್ಕಳಿಗಾಗಿ ಜೇಡಿಮಣ್ಣಿನಿಂದ ಪರಿಸರ ಸ್ನೇಹಿ ಜೀವ ಗಣೇಶ ಮೂರ್ತಿ ತಯಾರಿಸುವ ಶಿಬಿರ ಹಮ್ಮಿಕೊಂಡಿತ್ತು.

ಶಿಬಿರದಲ್ಲಿ 100ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ವಿಭಿನ್ನ ಶೈಲಿಯ ಗಣಪತಿ ಮೂರ್ತಿ ತಯಾರಿಸಿ, ಸಂಭ್ರಮಿಸಿದರು. ಮೂರ್ತಿಯೊಳಗೆ ಬೀಜ ಇಟ್ಟು ಜೀವ ಗಣಪತಿ ತಯಾರಿಸಿ ಖುಷಿಪಟ್ಟು ಮನೆಗಳಿಗೆ ತೆಗೆದುಕೊಂಡು ಹೋದರು.

ಈ ವೇಳೆ ಕಲಾವಿದರಾದ ಆರ್.ಲಕ್ಷೀ ಚಲಪತಿ ಮಾತನಾಡಿ,ಭಗವಂತನಿಗೆ ಭಕ್ತಿಯಿಂದ ನೆರವೇರಿಸುವ ಪೂಜೆ ಮುಖ್ಯವೇ ಹೊರತು ವಿಜೃಂಭಣೆ, ಆಡಂಬರವಲ್ಲ, ರಾಸಾಯನಿಕ ವಸ್ತುಗಳಿಂದ ತಯಾರಿಸಿದ ಗಣೇಶ ಮೂರ್ತಿಗಳು ಪರಿಸರಕ್ಕೆ ಹಾನಿಕಾರಕ ಜತೆಗೆ ಜಲಮಾಲಿನ್ಯ ಉಂಟಾಗುತ್ತಿದೆ, ಜೀವ ಜಂತುಗಳಿಗೂ ಹಾನಿ ಸಂಭವಿಸುತ್ತಿದೆ. ಶುದ್ಧ ಜೇಡಿಮಣ್ಣಿನಿಂದ ತಯಾರಿಸಿದ ಚಿಕ್ಕ ಗಣೇಶ ಮೂರ್ತಿಗಳನ್ನು ಇಟ್ಟು ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ಮಕ್ಕಳಿಗೆ ತಿಳಿಹೇಳಿದರು.

ಇಂದಿರಾ ಗಾಂಧಿ ಬ್ಲಾಕ್ ಅಧ್ಯಕ್ಷರಾದ ಮಂಜೇಗೌಡನ ಕೊಪ್ಪಲು ರವಿ ಮಾತನಾಡಿ ಶಾಸ್ತ್ರಗಳ ಪ್ರಕಾರ ಕಲ್ಲು,ಮಣ್ಣು ಮತ್ತು ಲೋಹ ದಿಂದ ವಿಗ್ರಹವನ್ನು ತಯಾರಿಸ ಬೇಕು, ಇವುಗಳಲ್ಲಿ ಮಾತ್ರ ದೈವತ್ವದ ಶಕ್ತಿ ಇರುತ್ತದೆ, ಪಿಒಪಿಯಿಂದ ತಯಾರಿಸಿದ ಗಣೇಶಮೂರ್ತಿಗಳಲ್ಲಿ ದೈವಶಕ್ತಿ ಇರುವುದಿಲ್ಲ ಕೇವಲ ಪ್ರದರ್ಶನಕಷ್ಟೇ ಸೀಮಿತ ಎಂದು ತಿಳಿಸಿದರು.

ಶ್ರೀ ದುರ್ಗಾಪೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ್ ಮಾತನಾಡಿ ಪರಿಸರ ಸ್ನೇಹಿ ಗಣೇಶ ಮೂರ್ತಿ ಪೂಜಿಸಿ ಪರಿಸರ ರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಪರಿಸರ ಉಳಿಸಬೇಕಾದ್ದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಂತೋಷ್ ಕಿರಾಲು, ಅಶ್ವಿನಿ ಗೌಡ, ಶಾಲೆಯ ಮುಖ್ಯೋಪಾಧ್ಯಾಯರಾದ ಶುಭ, ಹಾಗೂ ಶಿಕ್ಷಕರು ಹಾಜರಿದ್ದರು.

ಪರಿಸರಸ್ನೇಹಿ ಗಣೇಶ ಮೂರ್ತಿ ತಯಾರಿಸಿದ ಚಿಣ್ಣರು Read More

ಅಗಸ್ತ್ಯ ಸೊಸೈಟಿ ಅಭಿವೃದ್ಧಿಗೆ ಸಹಕರಿಸಿ- ಎಂ. ಡಿ ಗೋಪಿನಾಥ್ ಮನವಿ

ಮೈಸೂರು: ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಸದಸ್ಯರು ಸಭೆಗೆ ಬಂದು ಸಹಿ ಮಾಡಿ ಹೋದರೆ ಸಾಲದು, ಜೊತೆಗೆ ಸೊಸೈಟಿಯ ವ್ಯವಹಾರ ನಡೆಸುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಅಧ್ಯಕ್ಷ ಎಂ. ಡಿ ಗೋಪಿನಾಥ್ ಹೇಳಿದರು.

ನಗರದ ಶಾರದಾ ವಿಲಾಸ್ ಶತಮಾನೋತ್ಸವ ಭವನದಲ್ಲಿ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 29ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಹಿರಿಯ ಸದಸ್ಯರನ್ನು ಸನ್ಮಾನಿಸಿ, ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ನಂತರ ಗೋಪಿನಾಥ್ ಮಾತನಾಡಿದರು.

ಸೊಸೈಟಿಯಿಂದ ಸಾಲ ಪಡೆದವರು ಸಕಾಲಕ್ಕೆ ಹಣ ಕಟ್ಟಿದರೆ ಸೊಸೈಟಿಯ ಅಭಿವೃದ್ಧಿಗೆ ಸಹಾಯವಾಗುತ್ತದೆ, ಸದಸ್ಯರು ನಿರಂತರವಾಗಿ ವ್ಯವಹರಿಸುವ ಮೂಲಕ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ
ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ, ಖಜಾಂಚಿ ಕೆ ನಾಗರಾಜ, ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್ ಎನ್, ವಿಕ್ರಂ ಅಯ್ಯಂಗಾರ್,ಮಹಿಮ ಪಿ, ನಾಗಶ್ರೀ ಎನ್, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್, ಶಾಶ್ವತಿ ನಾಯಕ ಎಂ ಪಿ, ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ಹಾಜರಿದ್ದರು.

ಅಗಸ್ತ್ಯ ಸೊಸೈಟಿ ಅಭಿವೃದ್ಧಿಗೆ ಸಹಕರಿಸಿ- ಎಂ. ಡಿ ಗೋಪಿನಾಥ್ ಮನವಿ Read More

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ನಂಬಿಕೆ ನಕ್ಷೆ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಹೇಳಿರುವುದು ಬ್ರ್ಯಾಂಡ್ ಬೆಂಗಳೂರು ನಾಟಕದ ಮತ್ತೊಂದು ಅಧ್ಯಾಯ ಎಂಬುದು ಬೆಂಗಳೂರಿಗರ ನಂಬಿಕೆಯಾಗಿದೆ ಎಂದು ಆರ್.ಅಶೋಕ್ ಛೇಡಿಸಿದ್ದಾರೆ.

ಪಾರ್ಟ್ ಟೈಮ್ ಬೆಂಗಳೂರು ಅಭಿವೃದ್ಧಿ ಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನೇಕ ಹೇಳಿಕೆಗಳು ಘೋಷಣೆಯಲ್ಲೇ ಉಳಿದಿರುವುದರಿಂದ ಸಾರ್ವಜನಿಕರಿಗೆ ಇವರ ಮೇಲೆ ಕಿಂಚಿತ್ತೂ ನಂಬಿಕೆ ಇಲ್ಲದಂತಾಗಿದೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.

ಮೇಕೆದಾಟು ನೀರು ಸಿಗುವ ನಂಬಿಕೆ ಇಲ್ಲ,ರಸ್ತೆ ಗುಂಡಿ ಮುಚ್ಚುವ ಬಗ್ಗೆ ನಂಬಿಕೆ ಇಲ್ಲ,ಮನೆ ಬಾಗಿಲಿಗೆ ಆಡಳಿತ ಘೋಷಣೆ ಬಗ್ಗೆ ನಂಬಿಕೆ ಇಲ್ಲ,ಕಾನೂನು ಸುವ್ಯವಸ್ಥೆ ಬಗ್ಗೆ ನಂಬಿಕೆ ಇಲ್ಲ,ನುಡಿದಂತೆ ನಡೆದಿದ್ದೇವೆ ಎಂಬ ಬಗ್ಗೆ ನಂಬಿಕೆ ಇಲ್ಲ,ಭ್ರಷ್ಟಾಚಾರ ಮುಕ್ತ ಆಡಳಿತದ ಬಗ್ಗೆಯಂತೂ ಎಳ್ಳಷ್ಟೂ ನಂಬಿಕೆ ಇಲ್ಲ.

ಒಟ್ಟಿನಲ್ಲಿ ಈ ಅಪನಂಬಿಕೆ ಸರ್ಕಾರದಿಂದ ನಂಬಿಕೆ ಹೆಸರಿನಲ್ಲಿ ಯೋಜನೆ ಘೋಷಣೆ ಆಗಿರುವುದು ಅತ್ಯಂತ ದೊಡ್ಡ ವಿರೋಧಾಭಾಸ ಎಂದರೆ ಅತಿಶಯೋಕ್ತಿ ಅಲ್ಲ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ನಂಬಿಕೆ ನಕ್ಷೆ ಯೋಜನೆ ಬಗ್ಗೆ ಅಶೋಕ್ ವ್ಯಂಗ್ಯ Read More

ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್:ಎಂ.ಲಕ್ಷ್ಮಣ್ ಆರೋಪ

ಮೈಸೂರು: ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್, ನ್ಯಾಯಾಲಯಕ್ಕೆ ಆತ ನೀಡಿರುವ ಎಲ್ಲಾ ದಾಖಲೆಗಳು ಫೇಕ್ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ಸ್ನೇಹಮಯಿ ಕೃಷ್ಣ ವಿರುದ್ಧ 22 ಪ್ರಕರಣಗಳಿವೆ,ನಗರ ವ್ಯಾಪ್ತಿಯಲ್ಲಿ 17, ಜಿಲ್ಲೆಯಾದ್ಯಂತ 4 ಒಟ್ಟು 21ಪ್ರಕರಣಗಳಿವೆ. ಈ ಎಲ್ಲಾ ಪ್ರಕರಣಗಳು ಕೂಡ ಬ್ಲಾಕ್ ಮೇಲ್ ಪ್ರಕರಣಗಳು ಎಂದು ಹೇಳಿದರು.

ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ನೀಡಿರುವ ಎಲ್ಲಾ ದಾಖಲೆಗಳು ನಕಲಿ ಎಂದು ಮತ್ತೆ ಒತ್ತಿ ಹೇಳಿದರು ಲಕ್ಷ್ಮಣ್.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್, ಜುಲೈ 1 ರಂದು ಪ್ರಾಧಿಕಾರ ರಚನೆಗೆ ಸರ್ಕಾರ ಆದೇಶ ಹೊರಡಿಸಿತ್ತು. 26-07-2024ರಂದು ಪ್ರಮೋದ ದೇವಿ ಒಡೆಯರ್ ರವರು ಸ್ಟೇ ತಂದಿದ್ದರು, ಚಾಮುಂಡಿ ಬೆಟ್ಟ ನಮ್ಮ ಖಾಸಗಿ ಆಸ್ತಿ ಎಂದಿದ್ದಾರೆ. ಆದರೆ ಈ ಹಿಂದಿನಿಂದಲೂ ರಾಜ್ಯ ಸರ್ಕಾರವೇ ಚಾಮುಂಡಿ ಬೆಟ್ಟ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು.

ಸಾರ್ವಜನಿಕರ ಒತ್ತಾಯದ ಮೇರೆಗೆ ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಾಯಿತು, ಸಂಪೂರ್ಣವಾಗಿ ಅಧಿಕಾರಿಗಳೇ ನಿರ್ವಹಣೆ ಮಾಡುವ ಪ್ರಾಧಿಕಾರ ಇದು, ಈಗ ಪ್ರಮೋದ ದೇವಿ ಒಡೆಯರ್ ತಂದಿದ್ದ ತಡೆಯಾಜ್ಞೆಯನ್ನ ನ್ಯಾಯಾಲಯ ತೆರವುಗೊಳಿಸಿದೆ ಎಂದು ಇದೇ ವೇಳೆ ಲಕ್ಷ್ಮಣ್ ತಿಳಿಸಿದರು.

ತಡೆಯಾಜ್ಞೆ ತೆರವುಗೊಳಿಸಿರುವುದರಿಂದ ಚಾಮುಂಡಿ ಬೆಟ್ಟ ಪ್ರಾಧಿಕಾರ ಅಧ್ಯಕ್ಷರಾದ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಭೆ ಆಯೋಜನೆ ಮಾಡಲಾಗಿದೆ. ಚಾಮುಂಡೇಶ್ವರಿ ತಾಯಿ ದೇವಸ್ಥಾನ, ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ ನಾವೆಲ್ಲರೂ ಮುಂದಾಗೋಣ ಎಂದು ‌ಹೇಳಿದರು.

ಸಿದ್ದಾರ್ಥ ಟ್ರಸ್ಟ್ ಗೆ ಕೆಐಎಡಿಬಿ ಜಮೀನು ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಣ್, ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ. ರಾಜ್ಯಪಾಲರು ಕಾರ್ಯದರ್ಶಿಗಳಿಗೆ ಮಾಹಿತಿ ನೀಡಲು ಪತ್ರ ಬರೆದಿದ್ದಾರೆ. ರಾಜ್ಯಪಾಲರು ಈ ವಿಚಾರವಾಗಿ ತುರ್ತಾಗಿ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಆದರೆ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳಿಗೆ ಮೌನ ವಹಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯಪಾಲರು ಬಿಜೆಪಿ ಅಣತಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಆದರೆ ರಾಜ್ಯಪಾಲರು ನನಗೆ ಯಾವುದೇ ಪತ್ರ ಬಂದಿಲ್ಲ ಎನ್ನುತ್ತಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬೆಳಿಗ್ಗೆ ಪತ್ರ ಬರೆದರೆ ಸಂಜೆಯೇ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಎಂ ಲಕ್ಷ್ಮಣ್ ದೂರಿದರು.

ಸ್ನೇಹಮಹಿ ಕೃಷ್ಣ ಬ್ಲಾಕ್ ಮೇಲರ್:ಎಂ.ಲಕ್ಷ್ಮಣ್ ಆರೋಪ Read More

ಸಚಿವ ಭೈರತಿ ಸುರೇಶ್ ಅವರ ರಾಜಿನಾಮೆಗೆಶಾಸಕ‌ ಶ್ರೀವತ್ಸ ಆಗ್ರಹ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಅವರ ರಾಜಿನಾಮೆ ಪಡಿಯಬೇಕು ಎಂದು ಸರ್ಕಾರವನ್ನು ಶಾಸಕ ಶ್ರೀವತ್ಸ ಆಗ್ರಹಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು,
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ದಿನೇಶ್ ಕುಮಾರ್ ರನ್ನು ಅಮಾನತು ಮಾಡಲಾಗಿದೆ, ಸಂಜೆಯೊಳಗೆ ಭೈರತಿ ಸುರೇಶ್ ಅವರ ರಾಜೀನಾಮೆಯನ್ನೂ ಪಡೆಯಿರಿ ಎಂದು ಆಗ್ರಹಿಸಿದರು.

ಮುಡಾದಲ್ಲಿ ಅದ್ವಾನ ನಡೆಯಲು ಸಚಿವರೇ ಕಾರಣ, ಕೇವಲ ದಿನೇಶ್ ಕುಮಾರ್ ಅಮಾನತು ಸಾಲದು ಅಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದು ಶಾಸಕ ಶ್ರೀವತ್ಸ ಹೇಳಿದರು.

ಸಚಿವ ಭೈರತಿ ಸುರೇಶ್ ಅವರ ರಾಜಿನಾಮೆಗೆಶಾಸಕ‌ ಶ್ರೀವತ್ಸ ಆಗ್ರಹ Read More

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ: ಸಿಎಂ ಎಚ್ಚರಿಕೆ

ಮೈಸೂರು: ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿಯ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ಉದ್ಘಾಟಿಸಿ ಸಿಎಂ ಮಾತನಾಡಿದರು‌.

ಹಿಂದೆಯೂ ಸಮಿತಿ ಇತ್ತು,ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದು ಹೇಳಿದರು

ಬೆಟ್ಟಕ್ಕಯ ಬರುವ ಭಕ್ತರಿಗೆ ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದು ಹೇಳಿದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು, ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮವನ್ನು ಶುಚಿತ್ವಕ್ಕೆ ಕೊಡಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದ್ದು ವಾಹನ ನಿಲುಗಡೆಗೆ ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಿಎಂ ತಿಳಿಸಿದರು.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದೆ,ಆದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸುವುದಿಲ್ಲ, ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಕಠಿಣ ಎಚ್ಚರಿಕೆ ನೀಡಿದರು.

ಶಕ್ತಿ ದೇವತೆ,ತಾಯಿ ಚಾಮುಂಡೇಶ್ವರಿ ಬಗ್ಗೆ ಕೋಟ್ಯಂತರ ಮಂದಿಗೆ ಅಪಾರ ಭಕ್ತಿ, ಶ್ರದ್ಧೆ, ನಂಬಿಕೆ ಇದೆ. ದೇಶದ ಮೂಲೆ ಮೂಲೆಗಳಿಂದ ಭಕ್ತರು ಬರುತ್ತಾರೆ,ಎಲ್ಲರಿಗೂ ಅಗತ್ಯ ಸವಲತ್ತುಗಳನ್ನು ಒದಗಿಸಬೇಕು ಎಂದು ಸೂಚನೆ ನೀಡಿದರು.

ಕೊಪ್ಪಳ ಹುಲಿಗಮ್ಮ ದೇವಸ್ಥಾನ ಮತ್ತು ಘಾಟಿ ಸುಬ್ರಮಣ್ಯ ದೇವಸ್ಥಾನಗಳ ಅಭಿವೃದ್ಧಿಗಾಗಿ ಪ್ರಾಧಿಕಾರ ರಚನೆ ಬಗ್ಗೆಯೂ ಹೆಚ್ಚಿನ ಬೇಡಿಕೆ ಇದೆ,ಈ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಸಭೆಯಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಎಚ್.ಕೆ.ಪಾಟೀಲ್, ಕೆ.ವೆಂಕಟೇಶ್, ರಾಮಲಿಂಗಾರೆಡ್ಡಿ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ರವಿಶಂಕರ್, ಡಾ.ತಿಮ್ಮಯ್ಯ, ಹರೀಶ್ ಗೌಡ, ಜಿ.ಟಿ.ದೇವೇಗೌಡ, ವಿವೇಕಾನಂದ ಮತ್ತಿತರ ಗಣ್ಯರು ಪಾಲ್ಗೊಂಡಿದ್ದರು.

ತಾಯಿ ಸನ್ನಿದಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸೂಕ್ತ ಕ್ರಮ: ಸಿಎಂ ಎಚ್ಚರಿಕೆ Read More

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ:ಪ್ರಮೋದಾದೇವಿ ವಿರೋಧ

ಮೈಸೂರು:ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ ಸಂಬಂಧ ಸರ್ಕಾರ ಮತ್ತು ರಾಜಮನೆತನ ನಡುವೆ ಜಟಾಪಟಿ ಮುಂದುವರೆದಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಾಧಿಕಾರ ರಚನೆ ಕುರಿತ ಸಭೆಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಚಾಮುಂಡಿ‌ ಬೆಟ್ಟದಲ್ಲಿ ಮಂಗಳವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ಸಭೆ ನಡೆಯುತ್ತಿದೆ.ಈ ಹಿನ್ನೆಲೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಮೇಲ್ ಮೂಲಕ ರಾಜವಂಶಸ್ಥೆ ಪ್ರಮೋದಾದೇವಿ ಅವರಿಗೆ ಪತ್ರ ಬರೆದು ಸಭೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು.

ಅದಕ್ಕೆ ಮೇಲ್ ಮೂಲಕವೇ ಪ್ರತ್ಯುತ್ತರ ನೀಡಿರುವ ಪ್ರಮೋದಾದೇವಿ ಒಡೆಯರ್, ಸಭೆ ಕಾನೂನು ಬಾಹಿರವಾಗಿ ನಡೆಯುತ್ತಿದೆ. ನ್ಯಾಯಾಲಯದ ವಿರುದ್ಧ ಸಭೆ ನಡೆಸುತ್ತಿರುವುದು ಸರಿಯಲ್ಲ, ಕಾನೂನು ಉಲ್ಲಂಘನೆ ಆಗಲಿದೆ ಎಂದ ಸೂಕ್ಷ್ಮ ಎಚ್ಚರಿಕೆ ನೀಡಿದ್ದಾರೆ.

ಸೆ. 5ಕ್ಕೆ ನ್ಯಾಯಾಲಯದಲ್ಲಿ ಮುಂದುವರಿದ ವಿಚಾರಣೆ ಇದೆ, ಹೀಗಿರುವಾಗ ಸಭೆ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಮೋದಾದೇವಿ ಪ್ರಶ್ನೆ ಮಾಡಿದ್ದು, ಸಭೆಗೆ ಗೈರಾಗಲು ನಿರ್ಧಾರ ಮಾಡಿದ್ದಾರೆ.

ಪ್ರಾಧಿಕಾರ ರಚನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ್ರಮೋದಾ ದೇವಿ ಅವರು ಚಾಮುಂಡೇಶ್ವರಿ ಬೆಟ್ಟ ನಮ್ಮ ಆಸ್ತಿ ಎಂದು ಪ್ರತಿಪಾದಿಸಿದ್ದಾರೆ.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಸಮಿತಿ ರಚನೆ:ಪ್ರಮೋದಾದೇವಿ ವಿರೋಧ Read More