ಆ. 14ರ ತನಕ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲೇ ಗತಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಲಯ ಆಗಸ್ಟ್ 14 ರವರೆಗೆ ವಿಸ್ತರಿಸಿ ಆದೇಶಿಸಿದೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಹಾಗೂ ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು.
ದರ್ಶನ್, ಪವಿತ್ರಾಗೌಡ, ಪವನ್, ಪ್ರದೂಷ್, ವಿನಯ್, ದೀಪಕ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಂತೆ ಎಸ್‌ಐಟಿ ನ್ಯಾಯಾಧೀಶರ ಮುಂದೆ ರಿಮ್ಯಾಂಡ್ ಕಾಪಿಯನ್ನು ಸಲ್ಲಿಸಿ ಮನವಿ ಮಾಡಿತ್ತು.
ಆ. 14ರ ತನಕ ದರ್ಶನ್ ಅಂಡ್ ಗ್ಯಾಂಗ್ ಗೆ ಜೈಲೇ ಗತಿ Read More