ಮೈಸೂರು: ಅವಧೂತ ದತ್ತ ಪೀಠಾಧಿಪತಿ
ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳ 83ನೇ ಜನ್ಮದಿನದ ಪ್ರಯುಕ್ತ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಹಣ್ಣು,ಪುಸ್ತಕ ವಿತರಿಸಲಾಯಿತು.
ನಗರದ ಕೃಷ್ಣಮೂರ್ತಿ ಪುರಂ ನಲ್ಲಿರುವ ಶಾರದಾ ನೆಲೆ ವಿದ್ಯಾರ್ಥಿನಿಯರ ನಿಲಯದಲ್ಲಿ ಎಸ್ ಪ್ರಕಾಶ್ ಪ್ರಿಯದರ್ಶನ್ ಸ್ನೇಹ ಬಳಗದ ವತಿಯಿಂದ ಶ್ರೀಗಳ ಜನ್ಮದಿನವನ್ನು ವಿದ್ಯಾರ್ಥಿನಿಯರಿಗೆ ಕನ್ನಡ, ಹಿಂದಿ, ಇಂಗ್ಲಿಷ್ ಕಾಫಿ ರೈಟಿಂಗ್ ನೋಟ್ ಬುಕ್, ತರಕಾರಿ, ದಿನಸಿ ಸಾಮಗ್ರಿ
ಹಣ್ಣು ಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮೈಸೂರು ನಗರ ಜೆಡಿಎಸ್ ಕಾರ್ಯಾಧ್ಯಕ್ಷ ಎಸ್ ಪ್ರಕಾಶ್ ಪ್ರಿಯಾದರ್ಶನ್,
ಗಣಪತಿ ಸಚ್ಚಿದಾನಂದ ಆಶ್ರಮ ಆಧ್ಯಾತ್ಮಿಕ ಧಾರ್ಮಿಕ ಕೇಂದ್ರದೊಂದಿಗೆ ಪರಿಸರ ಪೋಷಣೆ ಮನಃಶಾಂತಿ ಸಿಗುವ ತಾಣವಾಗಿದೆ ಎಂದು ಬಣ್ಣಿಸಿದರು.

ಪ್ರವಾಸೋದ್ಯಮದಲ್ಲಿ ದೇಶವಿದೇಶದಿಂದ ಭಕ್ತವೃಂದವನ್ನು ಆಕರ್ಷಿಸುತ್ತದೆ, ಯಾವುದೇ ಜಾತಿಭೇದವಿಲ್ಲದೆ ಜನಮುಖಿ ಕೇಂದ್ರವಾಗಿದೆ, ಕಳೆದ ಕೋವಿಡ್ ಸಂದರ್ಭದಲ್ಲಿ ಲಕ್ಷಾಂತರ ಮಂದಿಗೆ ಪ್ರತಿನಿತ್ಯ ಅನ್ನದಾನ ಮತ್ತು ವೈದ್ಯಕೀಯ ನೆರವು ನೀಡಿ ಮಾನವೀಯತೆ ಮೆರೆದಿದೆ ಗಣಪತಿ ಸಚ್ಚಿದಾನಂದ ಆಶ್ರಮ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾರದಾ ನೆಲೆಯ ರಾಘವೇಂದ್ರ,ರೇವತಿ,ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಹೋಮದೇವ್, ಹಿರಿಯ ಕ್ರೀಡಾಪಟು ಮಹದೇವ್, ಬಿಜೆಪಿ ಮುಖಂಡ ಪುರುಷೋತ್ತಮ್,ಕ್ರೀಡಾ ತರಬೇತಿದಾರ ಜಗದೀಶ್, ರಾಜೇಶ್ ಕುಮಾರ್, ಪ್ರೇಮ, ಸುಹೀತ್,ಎಸ್ ಪಿ ಅಕ್ಷಯ್ ಪ್ರಿಯಾದರ್ಶನ್ ಹರ್ಷಿತ್ ಎಸ್ ನಾಗೇಶ್, ದತ್ತ ಮತ್ತಿತರರು ಹಾಜರಿದ್ದರು.