ಮೈಸೂರು: ಮೈಸೂರಿನ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಎಸ್ ಇ ಗಿರೀಶ್ ಅವರು ಆರೋಗ್ಯ ರಕ್ಷಕ ಸೇವಾ ಪ್ರಶಸ್ತಿ 2026ಕ್ಕೆ ಭಾಜನರಾಗಿದ್ದಾರೆ.
ಬ್ಲಡ್ ಆನ್ ಕಾಲ್ ಕ್ಲಬ್ ವತಿಯಿಂದ ನ್ಯೂ ಸಯ್ಯಾಜಿರಾವ್ ರಸ್ತೆ ಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಆರೋಗ್ಯ ರಕ್ಷಕ ಸೇವಾ ಪ್ರಶಸ್ತಿ 2026 ಪ್ರಧಾನ ಕಾರ್ಯಕ್ರಮದಲ್ಲಿ 35ಕ್ಕೂ ಹೆಚ್ಚು ಮಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ಇದೇ ವೇಳೆ 20 ವರುಷ ನಿರಂತರ ಸಾಮಾಜಿಕ ಸೇವೆ ಹಾಗೂ ಸಂಘಟನೆಯಿಂದ ಸೇವೆ ಸಲ್ಲಿಸುತ್ತಿರುವ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಎಸ್ ಇ ಗಿರೀಶ್ ಅವರಿಗೆ ಆರೋಗ್ಯ ರಕ್ಷಕ ಸೇವಾ ಪ್ರಶಸ್ತಿ 2026 ಪ್ರದಾನ ಮಾಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ ಅವರು,
ಸೇವೆಯನ್ನು ಆತ್ಮ ತೃಪ್ತಿ ಮತ್ತು ಮನಸ್ಸಿನ ಸಂತೋಷಕ್ಕಾಗಿ ಮಾಡುತ್ತೇವೆ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಅವರು ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದವರ ಸೇವೆಯ ಜೊತೆಗೆ ಬಡ ವಿದ್ಯಾರ್ಥಿ ಹಾಗೂ ರೋಗಿಗಳಿಗೆ ಸಹಾಯ ಮಾಡುವ ಮೂಲಕ ನಿಸ್ವಾರ್ಥ ಸೇವೆ ಮಾಡುತ್ತಾ ನಿಜವಾದ ಸಮಾಜ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ ಲಿಂಗರಾಜು ಅವರು ಮಾತನಾಡಿ, ರಕ್ತದಾನಕ್ಕಿಂತ ಶ್ರೇಷ್ಠವಾದ ದಾನ ಮತ್ತೊಂದಿಲ್ಲ. ಅಪಘಾತ ಮತ್ತಿತರರ ಘಟನೆ ಸಂದರ್ಭದಲ್ಲಿ ರಕ್ತದ ಕೊರತೆಯಿಂದ ಪ್ರಾಣ ಕಳೆದುಕೊಳ್ಳುವ ಸ್ಥಿತಿಯಲ್ಲಿರುವ ರೋಗಿಗಳಿಗೆ ರಕ್ತದಾನ ಮಾಡುವವರೇ ಎರಡನೇ ದೇವರಾಗುತ್ತಾರೆ ಅಂತಹ ಕೆಲಸದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರ 20 ವರ್ಷದಿಂದ ನಿರಂತರವಾಗಿ ಸೇವೆ ನಡೆಸುತ್ತಾ ಬಂದಿದೆ,ಸರ್ಕಾರದಿಂದ ಜೀವದಾರ ರಕ್ತ ನಿಧಿ ಕೇಂದ್ರಕ್ಕೆ ಮೈಸೂರು ನಗರದ ಅತ್ಯುತ್ತಮ ರಕ್ತ ನಿಧಿ ಕೇಂದ್ರ ಎಂಬ ಪ್ರಶಂಸೆಗೆ ಪಾತ್ರವಾಗಿದೆ ಎಂಬುದು ಹೆಮ್ಮೆಯ ವಿಚಾರ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಚಾಮರಾಜ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ದಿನೇಶ್ ಗೌಡ, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಗೌಡ, ಜೋಗಿ ಮಂಜು, ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ನಿರೂಪಕ ಅಜಯ್ ಶಾಸ್ತ್ರಿ, ಬ್ಲಡ್ ಆನ್ ಕಾಲ್ ಕ್ಲಬ್ ಆನಂದ್, ದೇವೇಂದ್ರ ಪರಿಹಾ ರಿಯ, ಜಿ ರಾಘವೇಂದ್ರ, ಕೃಷ್ಣಪ್ಪ (ಗಂಟಯ್ಯ), ಎಸ್ ಎನ್ ರಾಜೇಶ್, ಸುರೇಶ್ ಗೋಲ್ಡ್, ಕೇಬಲ್ ವಿಜಿ,ರಂಗನಾಥ್, ಸದಾಶಿವ್,
ಮತ್ತಿತರರು ಹಾಜರಿದ್ದರು.
