ಮೈಸೂರು: ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ವಜಾ ಮಾಡುವಂತೆ ರಾಜ್ಯ ಸರ್ಕಾರವನ್ನು ಅಖಿಲ ಕರ್ನಾಟಕ ವೀರಶೈವ ಲಿಂಗಾಯಿತ ರಕ್ಷಣಾ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಲ್. ರುದ್ರಮೂರ್ತಿ ಆಗ್ರಹಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ರಕ್ಷಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಅವರ ಈ ಅಪ್ರಬುದ್ದ ಹೇಳಿಕೆಯಿಂದ ಇಡೀ ಸಮುದಾಯಕ್ಕೆ ಬೇಸರ ಉಂಟು ಮಾಡಿದೆ ಎಂದು ಎಲ್. ರುದ್ರಮೂರ್ತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ನಾಗಲಕ್ಷ್ಮಿ ಚೌದರಿ ಅವರು ವೀರಶೈವ ಲಿಂಗಾಯತ ಸಮುದಾಯದ ಬಹಿರಂಗ ಕ್ಷಮೆ ಕೇಳಬೇಕು ಮತ್ತು ರಾಜ್ಯ ಸರ್ಕಾರ ಈ ಕೂಡಲೇ ಅವರನ್ನು ಆಯೋಗದ ಅಧ್ಯಕ್ಷ ಸ್ಥಾನದಿಂದ ವಜಾ ಗೊಳಿಸಬೇಕು ಎಂದು ಎಲ್. ರುದ್ರಮೂರ್ತಿ ಆಗ್ರಹಿಸಿದ್ದಾರೆ.
ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡುವುದಾಗಿ ಎಲ್. ರುದ್ರಮೂರ್ತಿ ಎಚ್ಚರಿಸಿದ್ದಾರೆ.
ತೇಜಸ್ವಿ ನಾಗಲಿಂಗಸ್ವಾಮಿ ಆಗ್ರಹ-
ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಗುರವಾಗಿ ಹೇಳಿಕೆ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರನ್ನು ವಜಾ ಮಾಡಬೇಕೆಂದು ವೀರಶೈವ ಲಿಂಗಾಯತ ಸಮುದಾಯದ ಯುವ ಮುಖಂಡ ತೇಜಸ್ವಿ ನಾಗಲಿಂಗಸ್ವಾಮಿ ಕೂಡಾ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಯಾವುದೋ ಒಂದು ಘಟನೆಯನ್ನು ಹಿಡಿದು ಇಡೀ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಹಾಗುರವಾಗಿ ಮಾತನಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಅವರ ಈ ಅಪ್ರಬುದ್ದ ಹೇಳಿಕೆಯಿಂದ ಇಡೀ ಸಮುದಾಯಕ್ಕೆ ಬೇಸರ ಉಂಟಾಗಿದೆ ಎಂದು ತೇಜಸ್ವಿ ತಿಳಿಸಿದ್ದಾರೆ.
ಸರ್ಕಾರ ನಾಗಲಕ್ಷ್ಮಿ ಚೌಧುರಿ ಮೇಲೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ನಡೆಸುವುದಾಗಿ ರಾಜ್ಯ ಸರ್ಕಾರಕ್ಕೆ ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ.
