ಮೈಸೂರು: ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಂತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಪ್ರಚಾರಕ ಬಿ.ಎಲ್. ಸಂತೋಷ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದು ಖಂಡನೀಯ’ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷೆ ಹೇಮನಂದೀಶ್ ಕಿಡಿ ಕಾರಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಪರವಾಗಿ ನಿಲ್ಲುವ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಪಿತೂರಿಯ ಮುಂದುವರಿದ ಭಾಗವಾಗಿ ಸಂತೋಷ್ ಅವರ ವಿರುದ್ಧ ಹೇಳಿಕೆ ನೀಡಲಾಗಿದೆ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇಂತಹ ಹೇಳಿಕೆಗಳ ಮೂಲಕ ಬಿ.ಎಲ್. ಸಂತೋಷ್ ಅವರ ಧರ್ಮಪರ ಹೋರಾಟ ತಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ.
ಮತ ಕಳ್ಳತನದ ಮೂಲಕ ಬಿಜೆಪಿ ಅಧಿಕಾರಕ್ಕೆ ಏರಿದೆ ಎಂದು ದೇಶಾದ್ಯಂತ ರಾಹುಲ್ ಗಾಂಧಿ ಪ್ರತಿಪಕ್ಷಗಳು ಕೇಂದ್ರ ಚುನಾವಣೆ ಆಯೋಗ ಹಾಗೂ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿರುವುದಕ್ಕೆ ಕೇಂದ್ರ ಚುನಾವಣೆ ಆಯೋಗ ಸ್ಪಷ್ಟ ಉತ್ತರ ನೀಡಿದೆ ಎಂದು ಹೇಮಾ ನಂದೀಶ್ ತಿರುಗೇಟು ನೀಡಿದ್ದಾರೆ.
ಆರೋಪ ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿದ ಅವಮಾನ ಎಂದು ಕೇಂದ್ರ ಚುನಾವಣೆ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರತಿಪಕ್ಷ ನಾಯಕರಾಗಿ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ಚುನಾವಣೆ ಆಯೋಗ ತಿಳಿಸಿದಂತೆ ರಾಹು ಲ್ ಗಾಂಧಿ ಅಫಿಡವಿಟ್‌ಗೆ ಸಹಿ ಮಾಡ ಬೇಕು ಅಥವಾ ದೇಶದ ಜನರ ಮುಂದೆ ತಪ್ಪು ಒಪ್ಪಿಕೊಂಡು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಹೇಮಾ ಒತ್ತಾಯಿಸಿದ್ದಾರೆ.