ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷದ ರಾಜಕೀಯ ಜೀವನದ ಹಿನ್ನಲೆಯಲ್ಲಿ ಮೇ 9 ರಂದು ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಅಭಿಮಾನೋತ್ಸವ ನೆರವೇರಲಿದ್ದು,ಸ್ಥಳ ಪರಿಶೀಲನೆ ನಡೆಸಿ ನಂತರ ವಿಜಯೇಂದ್ರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ರಾಜ್ಯದ ವಿವಿಧೆಡೆಗಳ ಕಾರ್ಯಕ್ರಮದಲ್ಲಿ
ಭಾಗವಹಿಸಲಿದ್ದಾರೆ ಮೇ 9ರಂದು ಬೆಳಿಗ್ಗೆ ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ನಡೆಯಲಿದೆ. ಆದ್ದರಿಂದ ಮಾಜಿ ಮುಖ್ಯಮಂತ್ರಿಗಳಾದ ಬಿಎಸ್ವೈ ಅಭಿಮಾನೋತ್ಸವವು ಬೆಳಿಗ್ಗೆ ಬದಲಾಗಿ ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ನಡೆಯಲಿದೆ. 3.45ರವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಮಠಾಧೀಶರನ್ನು ಸ್ವಯಂ ಆಗಿ ಕರೆಯಬೇಕು ಎಂಬ ಅಭಿಲಾಷೆ ನಮಗೂ ಇದೆ ಆದರೆ ಸಮಯ ಮತ್ತು
ಕೆಲಸದ ಒತ್ತಡದಿಂದ ಅಗುತ್ತಿಲ್ಲ ಈ ಹಿನ್ನಲೆಯಲ್ಲಿ ನಮ್ಮ ಕಾರ್ಯಕ್ರಮಕ್ಕೆ ಎಲ್ಲಾ ಮಠಾಧೀಶರು ಆಗಮಿಸುವುದರ ಮೂಲಕ ಯಡಿಯೂರಪ್ಪ ಅವರನ್ನು ಆರ್ಶೀವಾದ ಮಾಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ರಾಜ್ಯದ ವಿವಿಧೆಡೆಗಳಿಂದ
ಸುಮಾರು 10 ಸಾವಿರ ಬಸ್ ಗಳು ಹಾಗೂ ಸಾವಿರಾರು ವಿವಿಧ ರೀತಿಯ ವಾಹನಗಳು ಆಗಮಿಸಲಿವೆ. ಈ ಕಾರ್ಯಕ್ರಮಕ್ಕೆ ನಮ್ಮ ನಿರೀಕ್ಷೆ ಮೀರಿ ಜನರಿಂದ ಸ್ಪಂದನೆ ಸಿಕ್ಕಿದೆ, ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದು ವಿಜಯೇಂದ್ರ ತಿಳಿಸಿದರು.
ಮಾಜಿ ಡಿಸಿಎಂ ಹಾಗೂ ಸಂಸದ ಗೋವಿಂದ ಕಾರಜೋಳ ಮಾತನಾಡಿ, ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಮಾಜ ಸೇವೆ, ಜೀವನಚರಿತ್ರೆಯನ್ನು ನಾವು ಐತಿಹಾಸಿಕ ನಗರ ಚಿತ್ರದುರ್ಗದಲ್ಲಿ ಒಂದು ಸಾಂಸ್ಕಂತಿಕ ಹಬ್ಬದ ರೀತಿಯಲ್ಲಿ
ಆಚರಿಸಲು ನಿರ್ಧರಿಸಿದ್ದೇವೆ ಅವರ ಜೀವನಚರಿತ್ರೆ ಮತ್ತು ಸದನದಲ್ಲಿ ಯಡಿಯೂರಪ್ಪನವರು ಸಂಬಂಧದ `ಕೆಂದಾವರೆ-ಕಮಲದಲ್ಲಿ ಅರಳಿದ ಹೂ’ ‘ಸದನದಲ್ಲಿ ಶಿಕಾರಿ’ ಎಂಬ 2 ಗ್ರಂಥಗಳನ್ನು ಅವತ್ತು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಮೇ 8ರಂದು ಸಂಜೆ ಯಡಿಯೂರಪ್ಪನವರ ಪುರಪ್ರವೇಶ ನಡೆಯಲಿದೆ. ಇದನ್ನು ನಾಡಿನ ಸಾಂಸ್ಕಂತಿಕ ಹಬ್ಬದ ರೀತಿಯಲ್ಲಿ
ಮಾಡಲು ತಯಾರಿ ಮಾಡಿದ್ದೇವೆ. 24 ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಹರೀಶ್ ಪುಂಜ, ರಘು ಕೌಟಿಲ್ಯ, ಬಾಸ್ಕರ್ ರಾವ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ,
ಎಸ್.ಕೆ.ಬಸವರಾಜನ್, ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ, ಲಿಂಗಮೂರ್ತಿ, ಮಲ್ಲಿಕಾರ್ಜನ್ ಸಂಪತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
