ಮೈಸೂರು: ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ನಮನ ಸಲ್ಲಿಸಲಾಯಿತು.
ಕೆಪಿಸಿಸಿ ಸದಸ್ಯರಾದ ನಜರ್ ಬಾದ್ ನಟರಾಜ್ ಅವರು ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಬಾಬು ಜಗಜೀವನ್ ರಾಮ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ವೇಳೆ ಪಂಚಾಯತ್ ರಾಜ್ ಕಾರ್ಯದರ್ಶಿ ಲೋಕೇಶ್ ,ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಡೈರಿ ವೆಂಕಟೇಶ್, ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತರಾದ ಸೋಮಶೇಖರ್, ಮಹೇಂದ್ರ ಗೌಡ,ನಾಗಮಹದೇವ, ಕೃಷ್ಣಪ್ಪ ಘಂಟೆಯ ಮತ್ತಿತರರು ಹಾಜರಿದ್ದರು.
