ಮೈಸೂರು: ಮೈಸೂರಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣ ಸಂಬಂಧ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಘಟನೆಯ ಸತ್ಯಾಸತ್ಯತೆ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿರುವುದಿಂದ ಮಗುವಿನ ಮೃತದೇಹವನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.
ಮಗುವಿನ ಪೋಷಕರು ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹಾಗಾಗಿ ಮರಣೋತ್ತರ ಪರೀಕ್ಷೆಗೆ ವೈದ್ಯಾಧಿಕಾರಿಗಳು ನಿರ್ಧಾರ ಮಾಡಿದ್ದು, ಪೋಷಕರು ಆರೋಪಿಸುವ ರೀತಿ ಒಂದು ವೇಳೆ ಇರುವೆ ಕಚ್ಚಿದ್ದರೆ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕಿದೆ.
ಪೋಷಕರು ಮಗುವಿನ ಸಾವಿಗೆ ನ್ಯಾಯ ಕೊಡಿಸುವಂತೆ ಒತ್ತಾಯಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮಗುವಿನ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ.
