ಮೈಸೂರು: ಕೃಷ್ಣರಾಜ ಯುವ ಬಳಗದ ವತಿಯಿಂದ ನಗರದ ಗನ್ ಹೌಸ್ ವೃತ್ತದಲ್ಲಿ ಬಸವೇಶ್ವರ ಜಯಂತಿ ಅಂಗವಾಗಿ
ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
ನಂತರ ಬಿಸಿಲಿನ ತಾಪ ಹೆಚ್ಚಿರುವ ಹಿನ್ನೆಲೆಯಲ್ಲಿ ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ ನೇತ್ರತ್ವದಲ್ಲಿ ಸಾರ್ವಜನಿಕರಿಗೆ ತಂಪಾದ ಬಾದಾಮಿ ಹಾಲನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮಹಾಪೌರರಾದ ಸಂದೇಶ ಸ್ವಾಮಿ,ನಗರ ಪಾಲಿಕೆ ಮಾಜಿ ಸದಸ್ಯರಾದ ಕೆ.ವಿ ಮಲ್ಲೇಶ್, ಕೆ.ವಿ ಶ್ರೀಧರ್, ಜಗದೀಶ್, ಮಂಚೇಗೌಡನ ಕೊಪ್ಪಲ್ ರವಿ, ಗುಡ್ಡಪ್ಪ ಶಿವಣ್ಣ, ಕೆ ಆರ್ ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಜೀವದಾರ ಗಿರೀಶ್, ದೂರ ರಾಜಣ್ಣ, ಸ್ಮಾರ್ಟ್ ಮಂಜು, ಗಣೇಶ್ ಮೂರ್ತಿ ಮತ್ತಿತರರು ಹಾಜರಿದ್ದರು.
