ಮೈಸೂರು: ಮೈಸೂರಿನ ಕುವೆಂಪುನಗರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಹಮ್ಮಿಕೊಳ್ಳಲಾಯಿತು.
ಈ ವೇಳೆ ಮಾತನಾಡಿದ ಜ್ಯೋತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚೆನ್ನಬಸಪ್ಪ,
ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಬದ್ಧತೆಯಿಂದ ಶಿಕ್ಷಣ ಪಡೆಯುವುದೂ ಸಹ ಪ್ರತಿಭೆಯೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ನೃತ್ಯ,ಸಂಗೀತದ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕಗಳಿಸಿದ ಧನುಶ್ರೀ, ಗಗನ ಹೆಚ್, ನಂದಿನಿ, ಕುಸುಮ ಅವರುಗಳಿಗೆ ಟಾಪರ್ ಬ್ಯಾಡ್ಜ್ ಗಳನ್ನು
ಪ್ರಣಮ್ಯ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ
ಸವಿತಾ ವಿತರಿಸಿದರು.
ಜ್ಯೋತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರವಿಂದ್ ಸಿ, ಹಾಗೂ ಪ್ರಾಂಶುಪಾಲರಾದ ಭರತ್ ರಾಜ್ ಹಾಗೂ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು