ಮೈಸೂರು: ಮಹಿಳೆಯೊಬ್ಬರ ಕೈಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಕೆ.ಎಂ.ಪುರ ಪೊಲೀಸರು ಬಂಧಿಸಿದ್ದಾರೆ.
ಕೆ.ಎಂ.ಪುರ ಗ್ರಾಮದ ಬಸ್ ಸ್ಟ್ಯಾಂಡ್ ಬಳಿ ಆ.4 ರಂದು ಮಹಿಳೆಯೊಬ್ಬರ ಕೈಬ್ಯಾಗ್ ಕಿತ್ತುಕೊಂಡು ಪರಾರಿಯಾಗಿದ್ದ ಆರೋಪಿ ಈಗ ಕಂಬಿ ಎಣಿಸುತ್ತಿದ್ದಾನೆ.
ಮಹಿಳೆ ಮನೆಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದು ಬ್ಯಾಗ್ ಕಿತ್ತು ಓಡಿದ್ದ ವ್ಯಕ್ತಿಯ ವಿರುದ್ಧ ಕೆ.ಎಂ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದಕ್ಷಿಣ ಉಪವಿಭಾಗ ಡಿಸಿಪಿ ರಾಜಣ್ಣ ಅವರ ಮಾರ್ಗದರ್ಶನದಲ್ಲಿ, ಕೆ.ಎಂ.ಪುರ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
