ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು ಪತಿಯೊಬ್ಬ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಬರ್ಭರವಾಗಿ ಹತ್ಯೆ ಮಾಡಿದ್ದಾನೆ,ಸುದ್ದಿ ಹರಡುತ್ತಿದ್ದಂತೆ ಇಡೀ ನಗರ ಬೆಚ್ಚಿ ಬಿದ್ದಿದೆ.
ಬೆಂಗಳೂರಿನ ಪೀಣ್ಯದಲ್ಲಿ ಈ ಘೋರ ಘಟನೆ ನಡೆದಿದ್ದು,ಗಂಗರಾಜು ಎಂಬಾತ ಪತ್ನಿ ಭಾಗ್ಯಮ್ಮ,ಮಗಳು ನವ್ಯ(19), ಹಾಗೂ ಅಕ್ಕನ ಮಗಳು ಹೇಮಾವತಿ(22)ಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾನೆ.
ಹೋಂಗಾರ್ಡ್ ಕೆಲಸ ಮಾಡುತ್ತಿದ್ದ ಗಂಗರಾಜು ಪತ್ನಿಯ ಶೀಲ ಶಂಕಿಸಿ ಈ ಕೃತ್ಯ ಎಸಗಿದ್ದಾನೆ. ನಂತರ ಮಚ್ಚು ಹಿಡಿದುಕೊಂಡೇ ಪೀಣ್ಯ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮೂರು ಕೊಲೆಯನ್ನು ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾನೆ.
ಗಂಗರಾಜು ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಹೋಂ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ.ಕೆಲಸಕ್ಕೆ ಹೋದ ಬಳಿಕ ಪತ್ನಿ ಭಾಗ್ಯಮ್ಮ ಪರಪುರುಷನ ಜೊತೆ ಚಕ್ಕಂದವಾಡುತ್ತಿದ್ದಳು. ಈ ವಿಷಯ ನನಗೆ ಮತ್ತು ನನ್ನ ಅಕ್ಕನ ಮಗಳಿಗೆ ಇಬ್ಬರಿಗೂ ಗೊತ್ತಿತ್ತು. ಹೀಗಾಗಿ ಮೂವರನ್ನು ಹತ್ಯೆ ಮಾಡಿದ್ದಾಗಿ ಆರೋಪಿ ಹೇಳಿದ್ದಾನೆ.
ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.