ಢಾಕಾ: ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ರಾಜೀನಾಮೆ ನೀಡಿದ್ದಾರೆ.
ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಿಕಟವರ್ತಿಯಾಗಿದ್ದ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಅವರು ತೀವ್ರ ಆರೋಗ್ಯ ಸಮಸ್ಯೆಯನ್ನು ಉಲ್ಲೇಖಿಸಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಶಹಾಬುದ್ದೀನ್ ಏಪ್ರಿಲ್ 2023ರಿಂದ ನಾಮಕಾವಸ್ತೆ ಎಂಬಂತೆ ಬಾಂಗ್ಲಾದೇಶದ ಅಧ್ಯಕ್ಷೀಯ ಹುದ್ದೆಯಲ್ಲಿದ್ದರು.
2024ರಲ್ಲಿ ಅವರ ಆಡಳಿತದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಭಾರೀ ವಿಶ್ವದ ಗಮನ ಸೆಳೆದಿತ್ತು. ದಂಗೆಯ ನಂತರ ಶೇಖ್ ಹಸೀನಾ ಭಾರತಕ್ಕೆ ಪಲಾಯನ ಮಾಡಿದ್ದರು.
ನಂತರದ ಶಹಾಬುದ್ದೀನ್ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿದಿದ್ದರು.
ಆದರೆ ಕೆಲವು ತಿಂಗಳಿಂದ ತಮ್ಮ ಆರೋಗ್ಯ ತೀವ್ರವಾಗಿ ಕ್ಷೀಣಿಸಿದೆ, ಆಟೋನಾಮಿಕ್ ನ್ಯೂರೋಪತಿ ಎಂಬ ನರಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದೇನೆ,ಒಮ್ಮೊಮ್ಮೆ ಪ್ರಜ್ಞಾಹೀನ ಸ್ಥಿತಿಗೆ ಹೋಗುತ್ತೇನೆ ಹಾಗಾಗಿ ಅತ್ಯಂತ ಜವಾಬ್ದಾರಿ ಹುದ್ದೆ ನಿಭಾಯಿಸುವುದು ಸಾಧ್ಯವಾಗುತ್ತಿಲ್ಲ ಎಂದು ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಷ್ಟ್ರದ ಮುಖ್ಯಸ್ಥರಾಗಿ ಶಹಾಬುದ್ದೀನ್ ಅವರು ಸಶಸ್ತ್ರ ಪಡೆಗಳ ಸುಪ್ರೀಂ ಕಮಾಂಡರ್,ಆದರೆ ಬಾಂಗ್ಲಾ ದೇಶದಲ್ಲಿ ಕಾರ್ಯಾಂಗದ ಅಧಿಕಾರವು ಪ್ರಧಾನಿ ಮತ್ತು ಸಂಪುಟದ ಬಳಿಯಲ್ಲೇ ಇರುತ್ತದೆ.
ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಈ ವರ್ಷದ ಅಂತ್ಯದೊಳಗೆ ಬಾಂಗ್ಲಾದೇಶಕ್ಕೆ ಮರಳಲು ಯೋಜಿಸಿರುವುದಾಗಿ ಹೇಳಿದ್ದಾರೆ.
