ಮೈಸೂರು, ಜು.1: ನಿಷೇಧಿತ ಪ್ಲಾಸ್ಟಿಕ್ ಬಳಕೆ ಪರಿಸರಕ್ಕೆ ಹಾನಿಕಾರಕ ಹಾಗಾಗಿ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರ ಅಧಿಕಾರಿ ಅರ್ಪಿತಾ ಅಂಗಡಿ ಮಾಲೀಕರಿಗೆ ಸೂಚನೆ ನೀಡಿದರು.
ಕಡಕೋಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿನ ಬಂಡಿಪಾಳ್ಯ ಗ್ರಾಮದ ಎಪಿಎಂಸಿ ಆವರಣದಲ್ಲಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿಯ ಸಂಯುಕ್ತಾಶ್ರಯದಲ್ಲಿ ಇಂದು ನಿಷೇಧಿತ ಪ್ಲಾಸ್ಟಿಕ್ ರೈಡ್ ಹಮ್ಮಿಕೊಳ್ಳಲಾಯಿತು.
ಈ ಸಂಬಂಧ 1337 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಾಯಕ ಪರಿಸರ ಅಧಿಕಾರಿ ಅರ್ಪಿತಾ ಅವರು ಅಂಗಡಿ,ಮಳಿಗೆಗಳವರಿಗೆ ನಿಷೇಧಿತ ಪ್ಲಾಸ್ಟಿಕ್ ಬಳಸದಂತೆ ಕಠಿಣ ಎಚ್ಚರಿಕೆ ನೀಡಿದರು.
ಈ ವೇಳೆ ಪಟ್ಟಣ ಪಂಚಾಯತಿ ಆರೋಗ್ಯ ನಿರೀಕ್ಷಕರಾದ ಮಂಜುನಾಥ್,ಪವನ್, ರಾಜಶೇಖರ್, ಅಕ್ಷತಾ, ಸುನಿಲ್, ಆನಂದ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.