ಮೈಸೂರು: ವೀರಶೈವ ಲಿಂಗಾಯತ ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ 2026ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಶೇಖರ್ ಅವರು ಆಯ್ಕೆಯಾಗಿದ್ದಾರೆ.
ಚಂದ್ರಶೇಖರ್ ಅವರು ಆಯ್ಕೆಯಾಗಿರುವುದು ಹಾಗೂ ಅವರ ಜನ್ಮದಿನವೂ ಕೂಡ ಇದ್ದುದರಿಂದ ಶುಕ್ರವಾರ ಬೆಳಿಗ್ಗೆ ಬಸವ ಪುತ್ಥಳಿಯಲ್ಲಿ ಎಲ್ಲಾ ಹಿರಿಯರು, ಬಂಧುಗಳು ಹಾಗೂ ಸಮಾಜದ ಮುಖಂಡರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜನಾರಿಗಾಗಿ ಸೇವಾ ಸಮಿತಿ ಅಧ್ಯಕ್ಷರಾದ ಮಹೇಶ್ ಕುಮಾರ್, ಮಾಜಿ ನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ಕನ್ನಡ ಕ್ರಾಂತಿದಳ ಅಧ್ಯಕ್ಷ ತೇಜಸ್ವಿ ನಾಗಲಿಂಗಸ್ವಾಮಿ, ನಗರ ಪಾಲಿಕೆ ಮಾಜಿ ಸದಸ್ಯರಾದ ಸುನೀಲ್, ಜ್ಞಾನ ಜ್ಯೋತಿ ಪ್ರತಿಷ್ಠಾನ ದ ಕಾರ್ಯದರ್ಶಿ ನಂಜುಂಡ ಸ್ವಾಮಿ, ವೀರಶೈವ ಮೂರ್ತಿ, ಮತ್ತಿತರರು ಹಾಜರಿದ್ದರು.
