ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವ ಉಧ್ಘಾಟಕರಾಗಿ ನಾಡಿನ ಹಿರಿಯ ವಿದ್ವಾಂಸರು ಪ್ರಗತಿಪರ ಚಿಂತಕರೂ ಆದ ಡಾ ಹಂಪ ನಾಗರಾಜಯ್ಯ ಅವರನ್ನು ಆಯ್ಕೆ ಮಾಡಿರುವುದನ್ನು
ಮೈಸೂರು ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ
ಬಸವರಾಜ್ ಬಸಪ್ಪ ಸ್ವಾಗತಿಸಿದ್ದಾರೆ.

ಕನ್ನಡ ಸಾಹಿತ್ಯ ಲೋಕಕ್ಕೆ ಮಹತ್ವದ ಕೃತಿಗಳನ್ನು ನೀಡುವ ಮೂಲಕ ಜನಪ್ರಿಯರಾದವರು ಡಾ ಹಂಪನಾ ಅವರು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಕೂಡ ಅನನ್ಯ ಸೇವೆ ಸಲ್ಲಿಸಿದ್ದಾರೆ.ಅವರ ಆಯ್ಕೆಗೆ ಮನ್ನಣೆ ನೀಡಿರುವ ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ ಶ್ಲಾಘನೀಯ ಎಂದು ಬಸವರಾಜ್ ಬಸಪ್ಪ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.