ನಂಜನಗೂಡು: ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ ಪ್ಲಾಸ್ಟಿಕ್ ಅನ್ನು ಸೋಲಿಸಿ ಪರಿಸರ ಉಳಿಸಿ ಘೋಷಣೆಯು ಅರ್ಥಗರ್ಭಿತವಾಗಿದೆ ಎಂದು ನಂಜನಗೂಡು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಆರ್. ದಿನೇಶ್ ತಿಳಿಸಿದರು.
ಕಾಲೇಜಿನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ಸನ್ನಿವೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯಗಳು ಹೆಚ್ಚುತ್ತಿರುವುದರಿಂದ ಪ್ಲಾಸ್ಟಿಕ್ ಸೋಲಿಸಿ ಪರಿಸರ ನಾಶವನ್ನು ತಡೆಗಟ್ಟಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಂಜನಗೂಡು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕರಳಪುರ ವಿಜಯಕುಮಾರ್, ಮಾತನಾಡಿ ವಿದ್ಯಾರ್ಥಿಗಳಲ್ಲಿ ಪರಿಸರ ಪ್ರಜ್ಞೆ ಮೂಡಿದರೆ ಮುಂದಿನ ತಲೆಮಾರಿಗೆ ಸುಂದರ ಪರಿಸರವನ್ನು ನೀಡಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಹೇಶ್, ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಪುರ ನಾಗರಾಜು , ಕಾಲೇಜಿನ ಹಿರಿಯ ಉಪನ್ಯಾಸಕರಾದ ಎಸ್ ಲಿಂಗಣ್ಣ ಸ್ವಾಮಿ, ರಂಗಸ್ವಾಮಿ,ಎನ್. ನಾಗರಾಜು, ದಿನೇಶ್ ಎನ್, ನಾಗರಾಜ ರೆಡ್ಡಿ, ಹೆಚ್.ಕೆ. ಪ್ರಕಾಶ್, ಮಿಲ್ಟನ್ ಮನೋಗರನ್ ಹರ್ಷಿತ್ ,ನಿಂಗಯ್ಯ,ಮಹದೇವ ಸ್ವಾಮಿ ಮತ್ತಿತರರು ಹಾಜರಿದ್ದರು.