ಬೆಳಗಾವಿ: ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಈ ಘಟನೆ ನಡೆದಿದ್ದು,
ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಹಾವೇರಿ ಜಿಲ್ಲೆ, ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದ ವ್ಯಾಸಂಗ ಮಾಡುತ್ತಿದ್ದಳು.
ಹಾಸ್ಟೆಲಿನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.