ಬೆಳಗಾವಿ: ಬೆಳಿಗ್ಗೆ ಖಾಸಗಿ ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ತಂದೆ, ಮಗಳು ಸೇರಿದಂತೆ ಮೂವರು ಮೃತಪಟ್ಟ ಘಟನೆ ಜಿಲ್ಲೆಯ,ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದ ಸಮೀಪ ಸಂಭವಿಸಿದೆ.
ಸೈಪ್ ಮುಲ್ಲಾ (29), ಸಿಜಾ ಮುಲ್ಲಾ (4) ಹಾಗೂ ಅವರ ಸ್ನೇಹಿತ ಇಮ್ತಿಯಾಜ್ ಬಡಗಾಂವ (35) ಮೃರಪಟ್ಟ ದುರ್ದೈವಿಗಳು.
ಅಪಘಾತದಲ್ಲಿ ಗಂಬೀರವಾಗಿ ಗಾಯಗೊಂಡಿರುವ ಜಿಹಾನ್ ಶಾರುಕ್ ಕುಡಚಿಕರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಿಡಕಲ್ನಿಂದ ಗೋಕಾಕದತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಮತ್ತು ಪೋರ್ಬಸ್ ಶಾಲೆಯಿಂದ ಕೊಣ್ಣೂರಿನತ್ತ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಛಿಂದಿಯಾಗಿದ್ದು,ಅದರಲ್ಲಿ ಬರುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ಬಳಿಕ ಬಸ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡರು.
