ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ಮರಾಠಿ ಯುವಕರಿಂದ ಹಲ್ಲೆ

Spread the love

ಬೆಳಗಾವಿ: ಬೆಳಗಾವಿಯಲ್ಲಿ ಮರಾಠಿ ಹುಡುಗರು ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದ್ದು ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸುಳೇಬಾವಿ-ಬಾಳೆಕುಂದ್ರಿ ಮಾರ್ಗ ಮಧ್ಯೆ ಈ ಘಟನೆ ನಡೆದಿದ್ದು,ಮಹದೇವ್ ಹಲ್ಲೆಗೊಳಗಾಗಿರುವ ಬಸ್ ಕಂಡಕ್ಟರ್.

ಮರಾಠಿಯಲ್ಲಿ ಮಾತನಾಡುವಂತೆ ಒತ್ತಾಯಿಸಿ ಚಲಿಸುತ್ತಿದ್ದ ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಪಡ್ಡೆ ಹುಡುಗರು ಹಲ್ಲೆ ನಡೆಸಿದ್ದಾರೆ.

ಬಸ್ ನಲ್ಲಿದ್ದ ಯುವತಿಯೊಬ್ಬರು ಮರಾಠಿಯಲ್ಲಿ ಟಿಕೆಟ್ ಕೇಳಿದ್ದರು. ಕಂಡಕ್ಟರ್ ತನಗೆ ಮರಾಠಿ ಬರಲ್ಲ, ಕನ್ನಡದಲ್ಲಿ ಮಾತನಾಡಿ ಎಂದಿದ್ದಾರೆ. ಅಷ್ಟಕ್ಕೇ ಬಸ್ ನಲ್ಲಿದ್ದ ಮರಾಠಿ ಯುವಕರ ಗುಂಪು, ಕಂಡಕ್ಟರ್ ನನ್ನು ಹಿಡಿದು ಮರಾಠಿ ಮಾತನಾಡುವಂತೆ ಒತ್ತಾಯಿಸಿದ್ದಾರೆ,ಜತೆಗೆ ಬಸ್ ನಿಲ್ಲಿಸುವಂತೆ ಒತ್ತಾಯಿಸಿ, ಬಸ್ ನಿಲ್ಲಿಸಿ ಕಂಡಕ್ಟರ್ ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ವಿಷಯ ಹರಡುತ್ತಿದ್ದಂತೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ ಹಲ್ಲೆ ಮಾಡಿದ ಯುವಕರ ಮೇಲೆ ಕಠಿಣ ಕ್ರಮ ಜರುಗಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ವೇಳೆ ಮಾಧ್ಯಮ ಗಳೊಂದಿಗೆ ಮಾತನಾಡಿದ ಬಸ್ ನಿರ್ವಾಹಕ ಮಹದೇವ್ ಇಲ್ಲಿ ಡ್ರೈವರ್,ಕಂಡಕ್ಟರ್ ಗಳಿಗೆ ರಕ್ಷಣೆ ಇಲ್ಲದಂತಾಗಿದೆ ,ಸರ್ಕಾರ ರಕ್ಷಣೆ ಕೊಡಬೇಕು ಎಂದು ಮನವಿ ಮಾಡಿದರು.