ಮೈಸೂರು: ಮೈಸೂರಿನ ಉದ್ಬೂರು ಗೇಟ್ ಬಳಿ ಇರುವ ವಿಷ್ಣು ಸ್ಮಾರಕ ಭವನದಲ್ಲಿ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ ಮೊದಲನೇ ವರ್ಷದ ವಾರ್ಷಿಕೋತ್ಸವದಲ್ಲಿ ಹಿರಿಯ ನಟಿ ಭಾರತಿ ಖುಷಿಯಿಂದ ಪಾಲ್ಗೊಂಡಿದ್ದರು.
ಈ ವೇಳೆ ಅವರು ಆಚಾರ್ಯತ್ರಯರ ಹಾಗೂ ಸಾಹಸಸಿಂಹ ಡಾ. ವಿಷ್ಣುವರ್ಧನ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಅಖಿಲ ಭಾರತ ಅಸಂಘಟಿತ ಪುರೋಹಿತ ಕಾರ್ಮಿಕ ಫೆಡರೇಷನ್ 2026ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ಈ ವೇಳೆ ಮಾತನಾಡಿದ ಭಾರತಿ ವಿಷ್ಣುವರ್ಧನ್ ಅವರು,ಇಂತಹ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದರು.
ಪಂಚಾಂಗ ಒಳಗೊಂಡಿರುವ ಇಂತಹ ಕ್ಯಾಲೆಂಡರ್ ಬಹಳ ಉಪಯುಕ್ತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದೇವರ ಸೇವೆ ಮಾಡುವವರು, ದೇಶದ ಸುಭಿಕ್ಷೆ ಬಯಸುವ ನಿಮಗೆಲ್ಲರಿಗೂ ದೇವರ ಆಶೀರ್ವಾದ ಸದಾ ಇರಲಿ ಎಂದು ಭಾರತಿ ಶುಭ ಹಾರೈಸಿದರು.
ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಮಾ ವಿ ರಾಮಪ್ರಸಾದ್ ಅವರು ಮಾತನಾಡಿ, ಅಸಂಘಟಿತ ಪುರೋಹಿತ ಕಾರ್ಮಿಕರಿಗೆ ಸರ್ಕಾರದಿಂದ ನೀಡುವ ಸವಲತ್ತುಗಳು ಪ್ರತಿಯೊಬ್ಬರಿಗೂ ತಲುಪುವಂತಾಗಲಿ ಹಾಗೂ ಸಂಘಟನೆ ಹೆಚ್ಚು ಬಲಿಷ್ಠವಾಗಿ ಬೆಳೆಯಲಿ, ನಿಮ್ಮ ಸಂಘಟನೆಯ ಜೊತೆ ಸದಾ ನಾವು ಇರುತ್ತೇವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾಕ್ಟರ್ ಎಂ ಬಿ ಅನಂತಮೂರ್ತಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾಕ್ಟರ್ ಬಿ ಎನ್ ಮಹೇಶ್ ಕುಮಾರ್, ರಾಜ್ಯಾಧ್ಯಕ್ಷ ಡಾ. ಶ್ರೀನಿವಾಸ್ ಮೂರ್ತಿ, ರಾಜ್ಯ ಉಪಾಧ್ಯಕ್ಷ ಡಾಕ್ಟರ್ ಸತೀಶ್ ಸಿಂಹ,ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಕಾರ್ಯದರ್ಶಿ ಡಾ. ಲಕ್ಷ್ಮೀದೇವಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್,ಜ ಗೌರವಾಧ್ಯಕ್ಷರಾದ ಲಕ್ಷ್ಮೀಶ, ಅಧ್ಯಕ್ಷ ಸಂತೋಷ್ ಕುಮಾರ್ ಎಸ್ ದೇಶಿಕ್, ಉಪಾಧ್ಯಕ್ಷ ಎಂ ವಿ ಗಣೇಶ್, ಪ್ರಧಾನ ಕಾರ್ಯದರ್ಶಿ ರವಿಶಂಕರ್, ಕಾರ್ಯದರ್ಶಿ ಗುರುರಾಜ್, ಜಂಟಿ ಕಾರ್ಯದರ್ಶಿ ರವೀಂದ್ರ, ವಿಜಯ ವಿಠಲಚಾರ್ಯ, ಕೆ ಎಲ್ ವಿ ಶರ್ಮ,ಎಂ ಎನ್ ಪ್ರಸನ್ನಕುಮಾರ್, ರಾಜಣ್ಣ, ದತ್ತ ಕುಮಾರ್, ಧನುಷ್, ವೇಣುಗೋಪಾಲ್, ಸಂತೋಷ್ ಕೆ ಎಸ್ ಮತ್ತಿತರರು ಹಾಜರಿದ್ದರು.
