ಮೈಸೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ನೇಮಕರಾದ ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಹಾಗೂ ಎನ್ ಎಂ ನವೀನ್ ಕುಮಾರ್ ರವರಿಗೆ ಅಭಿನಂದನಾ ಸಮಾರಂಭವನ್ನು ಜೂ7 ರಂದು ಹಮ್ಮಿಕೊಳ್ಳಲಾಗಿದೆ.

ಎನ್ ಎಂ ನವೀನ್ ಕುಮಾರ್ ವಿಪ್ರ ಮಿತ್ರ ಬಳಗ ವತಿಯಿಂದ ಈ ಅಭಿನಂದನಾ ಸಮಾರಂಭ ನಡೆಯಲಿದೆ.

ತ್ಯಾಗರಾಜ ರಸ್ತೆಯಲ್ಲಿರುವ ಕಲ್ಯಾಣ ಭವನದಲ್ಲಿ ಜೂನ್ 7ರಂದು ಬೆಳಗ್ಗೆ 11 ಗಂಟೆಗೆ ಅಭಿನಂದನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ವಿಪ್ರ ಮುಖಂಡರಾದ ಸತ್ಯನಾರಾಯಣ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನೂತನ ಸದ್ಯಸ್ವತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ನೂತನ ಸದಸ್ಯರಿಗೆ ಐ ಡಿ ಕಾರ್ಡ್ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಮುಡಾ ಅಧ್ಯಕ್ಷರಾದ ಕೆ ಆರ್ ಮೋಹನ್ ಕುಮಾರ್ ಹಾಗೂ ಇನ್ನಿತರ ವಿಪ್ರ ಮುಖಂಡರು ಭಾಗವಹಿಸಲಿದ್ದಾರೆ.