ಮೈಸೂರು: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಗೆ ಬೆಂಕಿ ಹೊತ್ತಿ ಸುಟ್ಟು ಹೋದ ಘಟನೆ ಇಲವಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸ್ಪೆಂಡರ್ ಬೈಕ್ ಹಾಗೂ ಸ್ಟೀಫ್ಟ್ ಕಾರು ಸಾಗರಕಟ್ಟೆಯ ಸೇತುವೆ ಬಳಿ ಮುಖಾಮುಖಿ ಡಿಕ್ಕಿಯಾಗಿವೆ.
ಮೈಸೂರು ತಾಲ್ಲೂಕಿನ ಸಾಗರಕಟ್ಟೆ ಗ್ರಾಮದ ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಆದರೆ ಸವಾರರಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆ.ಆರ್ ನಗರ ಕಡೆಯಿಂದ ಬರುತ್ತಿದ್ದ ಕಾರು ಹೊಸಕೋಟೆ ಯಿಂದ ತೆರಳುತ್ತಿದ್ದ ಬೈಕ್ ಡಿಕ್ಕಿಯಾಗಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇಲವಾಲ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
