ಬಿಜೆಪಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆತ್ಮಹತ್ಯೆ

Spread the love

ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಂಜುಳಾ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಗರದ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು ಇಂದು ಬೆಳಕಿಗೆ ಬಂದಿದೆ.

ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಬರೆಯಲಾಗಿದೆ.ಈಕೆ ಬಿಜೆಪಿ ಮಲ್ಲೇಶ್ವರಂ ಮಂಡಲ ಪ್ರಧಾನ ಕಾರ್ಯದರ್ಶಿ ಯಾಗಿದ್ದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಂಜುಳಾ ಅವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಯಶವಂತಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.