ಸರ್ಕಾರಿ ಬಸ್ ಗಳ ಮೇಲೆಸ್ಟಿಕ್ಕರ್:
ಕ್ರಮಕ್ಕೆ ಬಿಜೆಪಿ ಯುವ ಮೋರ್ಚಾ ಆಗ್ರಹ
ಮೈಸೂರು: ಸರ್ಕಾರಿ ಬಸ್ ಗಳ ಮೇಲೆ
ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ನಿಯೋಗ ಆಗ್ರಹಿಸಿದೆ.
ಮತಗಳ್ಳತನ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಬಸ್ ಗಳ ಮೇಲೆ ಸ್ಟಾಪ್ ಮತ ಕಳ್ಳತನ ಎಂಬ ಒಕ್ಕಣೆ ಇರುವ ಸ್ಟಿಕ್ಕರ್ ಗಳನ್ನ ಅಂಟಿಸಿ ಪ್ರತಿಭಟನೆ ನಡೆಸಲಾಗಿತ್ತು.
ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಅವರ ನೇತೃತ್ವದಲ್ಲಿ ನಿನ್ನೆ ಸ್ಟಿಕ್ಕರ್ ಅಂಟಿಸುವ ಕಾರ್ಯ ನಡೆದು ಪ್ರತಿಭಟಿಸಲಾಗಿತ್ತು.
ಇದೀಗ ಕಾಂಗ್ರೆಸ್ ಕಾರ್ಯವನ್ನ ಖಂಡಿಸಿರುವ ಮೈಸೂರು ನಗರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ಯರು ಗುರುವಾರ ಕೆಎಸ್ ಆರ್ ಟಿ ಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಪತ್ರ ಬರೆದು ಸ್ಟಿಕ್ಕರ್ ಅಂಟಿಸಲು ಅನುಮತಿ ನೀಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಪತ್ರ ಕೊಟ್ಟು ಆಗ್ರಹಿಸಿದ್ದಾರೆ.