ರಕ್ತದಾನಿಗಳಿಗೆ ಜೀವಧಾರ ರಕ್ತ ನಿಧಿ ಕೇಂದ್ರದಿಂದ ಸತ್ಕಾರ

Spread the love

ಮೈಸೂರು: ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಜೀವಧಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ 15 ಬಾರಿ ಮೇಲ್ಪಟ್ಟು ಸ್ವಯಂ ಪ್ರೇರಿತ ರಕ್ತದಾನ ಮಾಡಿದ ರಕ್ತದಾನಿಗಳನ್ನು ಸತ್ಕರಿಸಿ ಗೌರವಿಸಲಾಯಿತು.

ಬ್ಲಡ್ ಆನ್ ಕಾಲ್ ಕ್ಲಬ್ ಸಹಯೋಗದೊಂದಿಗೆ 15 ಬಾರಿ ಮೇಲ್ಪಟ್ಟು ಸ್ವಯಂ ಪ್ರೇರಿತ ರಕ್ತದಾನ ಮಾಡಿದ
ನವೀನ್, ಕಾಂತಿಲಾಲ್ ಸಂದೇಶ, ಮಂಜುನಾಥ್ ವೈ ಎಸ್, ಯಶ್ವಂತ್, ರಶ್ಮಿ ಶರ್ಮಾ,ಪರಾಶ್ರಮ ಬೋರನ, ರಾಹುಲ್ ಕೊಠಾರಿ,ಮೀನಾಕ್ಷಿ ಕೊಠಾರಿ,ಮನೀಶ್ ಜೈನ್, ವನಿತಾ ಡಕ್, ಮುಕೇಶ್ ಅವರುಗಳನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಬಾರಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದ ದೇವೇಂದ್ರ ಪರಿಹಾರಿಯ ಅವರನ್ನು ವಿಶೇಷವಾಗಿ ಗೌರವಿಸಲಾಯಿತು.

ಈ ವೇಳೆ ಮಾತನಾಡಿದ ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್,
ರಕ್ತದಾನದಿಂದ ಶರೀರದಲ್ಲಿ ಚೈತನ್ಯ ಶಕ್ತಿಯು ಹೆಚ್ಚಾಗಿ ದೇಹದಲ್ಲಿ ಆರೋಗ್ಯಕರ ಬದಲಾವಣೆಗಳನ್ನು ಕಾಣಬಹುದು ಎಂದು ಹೇಳಿದರು.

ರಕ್ತದಾನದ ಬಗ್ಗೆ ಪರಿಚಯದರಿಗೂ ತಿಳಿಸಿ ಅವರನ್ನೂ ಇಂತಹ ಉತ್ತಮ ಕಾರ್ಯಗಳಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಮನವಿ ಮಾಡಿದರು.

ರಕ್ತದಾನದ ಬಗ್ಗೆ ಎಲ್ಲರೂ ತಿಳಿದುಕೊಳ್ಳಬೇಕು.ಅವಶ್ಯಕವಾದಾಗ ಹುಡುಕುವುದಕ್ಕಿಂತ ಮುಂಚೆಯೇ ಸಾಕಷ್ಟು ರಕ್ತವನ್ನು ಸಂಗ್ರಹಿಸಿಟ್ಟುಕೊಳ್ಳಲು ಕ್ರಮ ವಹಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ರಕ್ತದ ಕೊರತೆಯು ಹೆಚ್ಚಾಗಿರುವುದರಿಂದ ರಕ್ತದಾನದ ಅವಶ್ಯಕತೆಯಿದೆ. ದಾನಿಗಳು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರಿಂದ ರಕ್ತದ ಕೊರತೆಯನ್ನು ಸಾಧ್ಯವಾದ ಮಟ್ಟಿಗೆ ನಿಭಾಯಿಸಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಬ್ಲಡ್ ಆನ್ ಕಾಲ್ ಕ್ಲಬ್ ಮೈಸೂರಿನ ದೇವೇಂದ್ರ ಪರಿಹಾರಿಯ, ಆನಂದ್ ಮಾಂದೋಟ್, ಮಹಾವೀರ ಜೈನ, ಸಪ್ನ, ಮಮತಾ, ಸದಾಶಿವ್ ಮತ್ತಿತರರು ಹಾಜರಿದ್ದರು.