ಫೆ6 ಸ್ವಯಂ ಪ್ರೇರಿತ ರಕ್ತದಾನ ಶಿಬಿರ; ಎಸ್ ಇ ಗಿರೀಶ್ ಗೆ ಪ್ರಶಸ್ತಿ ಪ್ರದಾನ ಸಮಾರಂಭ

Spread the love

ಮೈಸೂರು: ಶ್ರೀ ದುರ್ಗಾ ಪೌಂಡೇಶನ್ ಹಾಗೂ ಅರಿವು ಸಂಸ್ಥೆ ವತಿಯಿಂದ ಫೆ.6 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜನನ

20 ವರ್ಷ ನಿರಂತರ ಸಾಮಾಜಿಕ ಸೇವೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಂಡು ಜೀವ ಧಾರೆ ಸೇವೆ ಸಲ್ಲಿಸುತ್ತಿರುವ ಎಸ್ ಇ ಗಿರೀಶ್ ರವರಿಗೆ ಜೀವರಕ್ಷಕ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ಕಾರ್ಯಕ್ರಮವನ್ನು ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರ ಆವರಣದಲ್ಲಿ ಫೆಬ್ರವರಿ 6ರಂದು ಮಧ್ಯಾಹ್ನ 12 ಗಂಟೆಗೆ ಏರ್ಪಡಿಸಲಾಗಿದೆ ಎಂದು ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಸಕರಾದ ಟಿ ಎಸ್ ಶ್ರೀವತ್ಸ, ಬಿಜೆಪಿ ನಗರಧ್ಯಕ್ಷರಾದ ಎಲ್ ನಾಗೇಂದ್ರ, ಜಿಲ್ಲಾಧ್ಯಕ್ಷರಾದ ಮಹಾದೇವಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್,ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣಗೌಡ,
ಎಂಸಿಸಿಐ ಅಧ್ಯಕ್ಷ ಕೆ.ಬಿ.ಲಿಂಗರಾಜು, ಮಂಡಿ ಮೊಹಲ್ಲಾ ವೃತ್ತ ನಿರೀಕ್ಷಕರಾದ ನಾಗೇಶ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.