ಚಿತ್ರದುರ್ಗ: ಮರಕ್ಕೆ ಬೊಲೆರೊ ಅಪ್ಪಳಿಸಿ ದಪರಿಣಾಮ ನಾಲ್ವರು ಕಾರ್ಮಿಕರು ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.
ಈ ಅಪಘಾತ ಹೊಳಲ್ಕೆರೆ ತಾಲೂಕಿನ
ಅಂದನೂರು ಗ್ರಾಮದ ಬಳಿ ನಡೆದಿದೆ.
ಕಲ್ಲವ್ವ ನಾಗತಿಹಳ್ಳಿ ಗ್ರಾಮದ ಗಿರಿರಾಜ್ (46), ಕಿರಣ್ (25) ಸ್ಥಳದಲ್ಲೇ ಮೃತಪಟ್ಟಿದ್ದು, ಅರುಣ್ (32) ಹಾಗೂ ಹನುಮಂತ (32) ದಾವಣಗೆರೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ಕಲ್ಲವ್ವ ನಾಗತಿಹಳ್ಳಿಗೆ ಹಿಂದಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ಮರಕ್ಕೆ ಡಿಕ್ಕಿ ಹೊಡೆದಿದೆ.
ಮೃತ ಕಾರ್ಮಿಕರು ಅಡಿಕೆ ಸುರಿಯುವ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಬೊಲೆರೊದಲ್ಲಿದ್ದ ಇತರೆ ನಾಲ್ವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಗಾಯಾಳುಗಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಬಂಧ ಚಿಕ್ಕಜಾಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
