ಮುಂಬೈ: ಇಂದು ಸಂಜೆ ಜುಹು ಬೀಚ್ ನಿಂದ ಫುಟ್ಬಾಲ್ ಆಟ ಮುಗಿಸಿ ವಾಪಸಾಗುತ್ತಿದ್ದ ಬಾಲಿವುಡ್ ಖ್ಯಾತ ನಟ ಟೈಗರ್ ಶ್ರಫ್ ಮೇಲೆ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು,ಬಾಲಿವುಡ್ ಮಂದಿ ಆಘಾತಕ್ಕೊಳಗಾಗಿದ್ದಾರೆ.
ಕೂದಲೆಳೆ ಅಂತರದಲ್ಲಿ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕನಿಗೆ ಗಾಯಗಳಾಗಿವೆ.
ಈ ಘಟನೆಯ ನಂತರ ವಿಡಿಯೋವೊಂದು ಹೊರಬಿದ್ದಿದ್ದು, ಲಾರೆನ್ಸ್ ಬಿಷ್ಣೋಯಿ ಗ್ಯಾಂಗಿನವನೆಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ ಹೊಣೆ ಹೊತ್ತುಕೊಂಡಿದ್ದಾನೆ.
ಟೈಗರ್ ಶ್ರಾಫ್ ತಮ್ಮ ಸೂಚನೆಗಳನ್ನು ಪಾಲಿಸುತ್ತಿರಲಿಲ್ಲ ಮತ್ತು ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮಾಡುತ್ತಿದ್ದ ಕಾರಣ, ಅವರನ್ನು ತಮ್ಮ ‘ಹಿಟ್ ಲಿಸ್ಟ್’ನಲ್ಲಿ ಇರಿಸಲಾಗಿತ್ತು ಎಂದು ಅವನು ತಿಳಿಸಿದ್ದಾನೆ.
ಟೈಗರ್ ಶ್ರಾಫ್ ಮೇಲಿನ ಗುಂಡಿನ ದಾಳಿಯ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸರು 15 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಈ ತಂಡಗಳು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿವೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮುಂಬೈ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ, ಶೀಘ್ರವೇ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
